ತಾರಾ ಶಹದೇವ್ 
ದೇಶ

ರಾಷ್ಟ್ರೀಯ ಶೂಟರ್ ಗೆ ಮತಾಂತರ ಒತ್ತಡ ಪ್ರಕರಣ: ತಾರಾ ಶಹದೇವ್ ಮಾಜಿ ಪತಿಗೆ ಜೀವಾವಧಿ ಶಿಕ್ಷೆ

ಮತಾಂತರ ಪ್ರಕರಣದಲ್ಲಿ ತಾರಾ ಶಹದೇವ್ ಅವರ ಮಾಜಿ ಪತಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ರಾಂಚಿ: ಮತಾಂತರ ಪ್ರಕರಣದಲ್ಲಿ ತಾರಾ ಶಹದೇವ್ ಅವರ ಮಾಜಿ ಪತಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ವಿಶೇಷ ಸಿಬಿಐ ನ್ಯಾಯಾಧೀಶ ಪ್ರಭಾತ್ ಕುಮಾರ್ ಶರ್ಮಾ ಅವರು ತಾರಾ ಶಹದೇವ್ ಅವರ ಮಾಜಿ ಪತಿ ರಂಜಿತ್ ಕೊಹ್ಲಿ ಅಲಿಯಾಸ್ ರಕಿಬುಲ್ ಹಸನ್‌ಗೆ ಜೀವಾವಧಿ ಶಿಕ್ಷೆ, ಅವರ ಮಾಜಿ ಅತ್ತೆ ಕೌಸರ್ ರಾಣಿಗೆ 10 ವರ್ಷ ಜೈಲು ಶಿಕ್ಷೆ ಮತ್ತು ಮುಷ್ತಾಕ್ ಅಹ್ಮದ್‌ಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಮೂವರಿಗೂ ತಲಾ 50,000 ರೂಪಾಯಿ ದಂಡವನ್ನೂ ನ್ಯಾಯಾಲಯ ವಿಧಿಸಿದೆ. ವಿಶೇಷ ಸಿಬಿಐ ನ್ಯಾಯಾಲಯವು ಪ್ರಕರಣದಲ್ಲಿ ಮೂವರೂ ತಪ್ಪಿತಸ್ಥರು ಎಂದು ಸೆಪ್ಟೆಂಬರ್ 30ರಂದು ತೀರ್ಪು ನೀಡಿದ್ದು ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.

2014ರ ಜುಲೈ 7ರಂದು ಹಿಂದೂ ಸಂಪ್ರದಾಯದ ಪ್ರಕಾರ ರಂಜಿತ್ ಕೊಹ್ಲಿ ಅಲಿಯಾಸ್ ರಕಿಬುಲ್ ಹಸನ್ ಅವರನ್ನು ವಿವಾಹವಾದರು, ಆದರೆ ಮದುವೆಯಾದ ಎರಡನೇ ದಿನದಲ್ಲಿ ಆಕೆಯ ಪತಿ ಮತ್ತು ಅಹ್ಮದ್ ಮತಾಂತರಗೊಳ್ಳುವಂತೆ ಒತ್ತಡ ಹೇರಲು ಪ್ರಾರಂಭಿಸಿದರು ಎಂದು ಶಹದೇವ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಅಹ್ಮದ್ ಆಗ ವಿಜಿಲೆನ್ಸ್ ರಿಜಿಸ್ಟ್ರಾರ್ ಆಗಿ ಕೆಲಸ ಮಾಡುತ್ತಿದ್ದರು.

ಸಿಬಿಐ 2015ರಲ್ಲಿ ತನಿಖೆಯನ್ನು ವಹಿಸಿಕೊಂಡಿತು. ದೆಹಲಿಯಲ್ಲಿ ಪ್ರಕರಣವನ್ನು ದಾಖಲಿಸಿತು. 2018 ರ ಜೂನ್‌ನಲ್ಲಿ ರಾಂಚಿಯ ಕೌಟುಂಬಿಕ ನ್ಯಾಯಾಲಯವು ಕ್ರೌರ್ಯದ ಆಧಾರದ ಮೇಲೆ ಶಾಹದೇವ್‌ಗೆ ವಿಚ್ಛೇದನವನ್ನು ನೀಡಿತು.

ಹಸನ್ ತನ್ನ ಧರ್ಮದ ಬಗ್ಗೆ ಸುಳ್ಳು ಮಾಹಿತಿ ನೀಡಿ ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆ ಎಂದು ಆರೋಪಿಸಿ ಶಹದೇವ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಸ್ಲಾಂಗೆ ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕಾಗಿ ಹಸನ್ ತನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಶಹದೇವ್ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ