ಜ್ಞಾನವಾಪಿ ಮಸೀದಿ (ಸಂಗ್ರಹ ಚಿತ್ರ) 
ದೇಶ

ಜ್ಞಾನವಾಪಿ ಮಸೀದಿ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 4 ವಾರ ಕಾಲಾವಕಾಶ ನೀಡಿದ ಕೋರ್ಟ್

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ...

ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ ಮತ್ತು ಈ ಅವಧಿಯನ್ನು ಮತ್ತೆ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರಿಗೆ, ಸಮೀಕ್ಷೆಯ ಅವಧಿಯನ್ನು ಇನ್ನೂ ನಾಲ್ಕು ವಾರಗಳವರೆಗೆ ವಿಸ್ತರಿಸುವಂತೆ ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಅವರು ಮನವಿ ಮಾಡಿದರು.

ಅಕ್ಟೋಬರ್ 6ರೊಳಗೆ ಸಮೀಕ್ಷೆಯ ವರದಿ ಸಲ್ಲಿಸಬೇಕಿದ್ದ ಎಎಸ್‌ಐ ಇದೀಗ ನವೆಂಬರ್ 6ರ ವರೆಗೆ ಕಾಲಾವಕಾಶ ಪಡೆದುಕೊಂಡಿದೆ.

ASI ಇಲ್ಲಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೇಡಿತನದ ಕೃತ್ಯ'; ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ ! Video Viral

RSS ನೋಂದಣಿ ಬಗ್ಗೆ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ: ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

Women's T20 World Cup 2026: ಪರಸ್ಪರ ಜುಟ್ಟು ಹಿಡಿದ ಭಾರತ-ಪಾಕ್ ಆಟಗಾರ್ತಿಯರು, ‘ಜಗಳ’ Video ವೈರಲ್: ಅಸಲೀಯತ್ತೇನು?

ಕುಟುಂಬ ಸದಸ್ಯರಿಗೆ ಮಟ್ಟಣ್ಣನವರ್ ಬೆದರಿಕೆ: ಚಿನ್ನಯ್ಯ ಆರೋಪ; ಫೋನ್ ಕರೆ ದಾಖಲೆ ಬಿಡುಗಡೆ ಮಾಡಿದ ಮಾಜಿ ಪೊಲೀಸ್ ಅಧಿಕಾರಿ!

ಸೂಪರ್ ಓವರ್​ನಲ್ಲಿ ಭಾರತ ಸೋಲುತ್ತಿದ್ದಂತೆ ಶ್ರೀಲಂಕಾ ಆಟಗಾರರು ಹಾಗೂ Vaibhav Sooryavanshi ನಡುವೆ ಗಲಾಟೆ, Video!

SCROLL FOR NEXT