ದೇಶ

ಮುಂಬೈ ಅಗ್ನಿ ಅವಘಡ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ

Manjula VN

ಮುಂಬೈ: ಮಹಾರಾಷ್ಟ್ರದ ಗೋರೆಗಾಂವ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನಗರಸಭೆ ಆಯುಕ್ತ ಮತ್ತು ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಘಟನೆ ನಿಜಕ್ಕೂ ದುರಾದೃಷ್ಟಕರ ಸಂಗತಿ. ಮೃತರ ಕುಟಂಬಕ್ಕೆ ಸಂತಾಪ ಸೂಚಿಸುತ್ತೇನೆ. ಅವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಮುಂಬೈನ ಗೋರೆಗಾಂವ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ತಿಳಿದು ನೋವಾಗಿದೆ. ಘಟನೆ ಸಂಬಂಧ ಬಿಎಂಸಿ ಮತ್ತು ಮುಂಬೈ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಗಾಯಾಳುಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುತ್ತಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.

ಈ ನಡುವೆ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಅಡಿಯಲ್ಲಿ ಮೃತರ ಕುಟುಂಬಕ್ಕೆ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

SCROLL FOR NEXT