ದೇಶ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯ ತೆಗೆದುಹಾಕಿ: X, YouTubeಗೆ ಕೇಂದ್ರ ಸೂಚನೆ

Lingaraj Badiger

ನವದೆಹಲಿ: ಭಾರತದಲ್ಲಿ ತಮ್ಮ ಪ್ಲಾಟ್‌ಫಾರ್ಮ್‌ಗಳಿಂದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ವಿಷಯಗಳನ್ನು ತೆಗೆದುಹಾಕುವಂತೆ ಸಾಮಾಜಿಕ ಮಾಧ್ಯಮಗಳಾದ ಎಕ್ಸ್(ಟ್ವಿಟರ್), ಯೂಟ್ಯೂಬ್ ಮತ್ತು ಟೆಲಿಗ್ರಾಮ್‌ಗಳಿಗೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮಗಳು ತ್ವರಿತವಾಗಿ ಕಾರ್ಯನಿರ್ವಹಿಸದಿದ್ದರೆ, ಐಟಿ ಕಾಯ್ದೆಯ ಸೆಕ್ಷನ್ 79 ರ ಅಡಿಯಲ್ಲಿ ಅವರ 'ಸುರಕ್ಷಿತ ತಾಣ' ಹಿಂತೆಗೆದುಕೊಳ್ಳಲಾಗುವುದು ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ "ಇಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮಗಳಾದ ಎಕ್ಸ್, ಯುಟ್ಯೂಬ್ ಮತ್ತು ಟೆಲಿಗ್ರಾಮ್ ಗಳಿಗೆ ನೋಟಿಸ್‌ ನೀಡಿದ್ದು, ಭಾರತೀಯ ಅಂತರ್ಜಾಲದಲ್ಲಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳು ಅಥವಾ ಮಾಹಿತಿಯನ್ನು ತೆಗೆದುಹಾಕುವಂತೆ ಸೂಚಿಸಿದೆ.

"ಈ ಪ್ಲಾಟ್‌ಫಾರ್ಮ್‌ಗಳಿಗೆ ನೀಡಲಾದ ಸೂಚನೆಗಳು, ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಯಾವುದೇ CSAM ಗೆ ಪ್ರವೇಶವನ್ನು ತ್ವರಿತವಾಗಿ ಮತ್ತು ಶಾಶ್ವತವಾಗಿ ತೆಗೆದುಹಾಕುವ ಅಥವಾ ನಿಷ್ಕ್ರಿಯಗೊಳಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ" ಎಂದು ಪ್ರಕಟಣೆ ತಿಳಿಸಿದೆ.

SCROLL FOR NEXT