ದೇಶ

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪುರ್ಕಾಯಸ್ಥ ಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

Lingaraj Badiger

ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಬಂಧನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ
ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರು, ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನಗರ ಪೊಲೀಸರಿಗೆ ಸೂಚಿಸಿದ್ದಾರೆ.

ಕೋರ್ಟ್ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿದೆ.

ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕ ಮಂಗಳವಾರ ಬಂಧಿಸಿದ್ದು, ದೆಹಲಿಯಲ್ಲಿರುವ ನ್ಯೂಸ್‌ಕ್ಲಿಕ್ ಕಚೇರಿಯನ್ನು ಪೊಲೀಸರು ಸೀಲ್ ಮಾಡಿದ್ದಾರೆ ಮತ್ತು  ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪತ್ರಕರ್ತರನ್ನು ವಿಚಾರಣೆಗೊಳಪಡಿಸಲಾಗಿದೆ.

SCROLL FOR NEXT