ದೇಶ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ನಡೆಸಲಾಗುವುದು: ಪ್ರಿಯಾಂಕಾ ಗಾಂಧಿ

Lingaraj Badiger

ಕಂಕೇರ್: ಮುಂಬರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲೂ ಬಿಹಾರದ ರೀತಿಯಲ್ಲೇ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಭರವಸೆ ನೀಡಿದ್ದಾರೆ.

ಇಂದು ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಪಂಚಾಯತ್ ರಾಜ್ ಮಹಾ ಸಮ್ಮಾನ್ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ವರ್ಷಾಂತ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಲಕ್ಷ ಮನೆಗಳನ್ನು ನೀಡುವುದಾಗಿ ಹೇಳಿದರು.

ಇದೇ ವೇಳೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, ಬಿಜೆಪಿ ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ. ಬಡವರ ಅಥವಾ ಮಧ್ಯಮ ವರ್ಗದ ಬಗ್ಗೆ ಅವರಿಗೆ ಯಾವುದೇ ಕಾಳಜಿಯಿಲ್ಲ ಎಂದು ಆರೋಪಿಸಿದರು.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಬಿಹಾರದಲ್ಲಿ ಜಾತಿ ಸಮೀಕ್ಷೆಯ ಮಾದರಿಯಲ್ಲಿಯೇ ರಾಜ್ಯದಲ್ಲೂ ಜಾತಿ ಗಣತಿ ನಡೆಸಲಾಗುವುದು ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು.

ಬಿಹಾರದ ಜಾತಿ ಸಮೀಕ್ಷೆಯ ಫಲಿತಾಂಶಗಳನ್ನು ಉಲ್ಲೇಖಿಸಿದ ಪ್ರಿಯಾಂಕಾ ಗಾಂಧಿ, ಆ ರಾಜ್ಯದ ಜನಸಂಖ್ಯೆಯ ಶೇಕಡಾ 84 ರಷ್ಟು ಜನ ಇತರ ಹಿಂದುಳಿದ ವರ್ಗ, ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಹೇಳಿದರು.

SCROLL FOR NEXT