ಗಾಜಾ ಪಟ್ಟಿಯಿಂದ ಉಡಾವಣೆಯಾದ ರಾಕೆಟ್ ದಕ್ಷಿಣ ಇಸ್ರೇಲ್‌ನ ಅಶ್ಕೆಲೋನ್‌ನಲ್ಲಿರುವ ಮನೆಯೊಂದಕ್ಕೆ ಬಡಿದ ನಂತರ ಹೊಗೆ ಬರುತ್ತಿರುವುದು 
ದೇಶ

ಇಸ್ರೇಲ್ ಮೇಲೆ ಗಾಜಾ ಉಗ್ರರ ದಾಳಿ: ತನ್ನ ನಾಗರಿಕರಿಗೆ ಸಲಹೆ ಎಚ್ಚರಿಕೆ ಹೊರಡಿಸಿದ ಭಾರತ, ಸಹಾಯಕ್ಕೆ ಈ ಸಂಖ್ಯೆಗೆ ಕರೆ ಮಾಡಿ

ಇಸ್ರೇಲ್ ರಕ್ಷಣಾ ಪಡೆಗಳು ಶನಿವಾರದಂದು ಗಾಜಾ ಪಟ್ಟಿಯಿಂದ ಬೃಹತ್ ರಾಕೆಟ್‌ಗಳ ಸುರಿಮಳೆ ಮತ್ತು ಇಸ್ರೇಲ್‌ಗೆ ಹಮಾಸ್ ಭಯೋತ್ಪಾದಕರ ಒಳನುಸುಳುವಿಕೆಯ ನಂತರ ಯುದ್ಧಕ್ಕೆ ಸನ್ನದ್ಧ ಸ್ಥಿತಿಯನ್ನು ಘೋಷಿಸಿದ ಬೆನ್ನಲ್ಲೇ ಭಾರತ ಎಚ್ಚೆತ್ತುಕೊಂಡಿದೆ.

ನವದೆಹಲಿ: ಇಸ್ರೇಲ್ ರಕ್ಷಣಾ ಪಡೆಗಳು ಶನಿವಾರದಂದು ಗಾಜಾ ಪಟ್ಟಿಯಿಂದ ಬೃಹತ್ ರಾಕೆಟ್‌ಗಳ ಸುರಿಮಳೆ ಮತ್ತು ಇಸ್ರೇಲ್‌ಗೆ ಹಮಾಸ್ ಭಯೋತ್ಪಾದಕರ ಒಳನುಸುಳುವಿಕೆಯ ನಂತರ ಯುದ್ಧಕ್ಕೆ ಸನ್ನದ್ಧ ಸ್ಥಿತಿಯನ್ನು ಘೋಷಿಸಿದ ಬೆನ್ನಲ್ಲೇ ಭಾರತ ಎಚ್ಚೆತ್ತುಕೊಂಡಿದೆ.

ಭಾರತವು ಇಂದು ಇಸ್ರೇಲ್‌ನಲ್ಲಿರುವ ತನ್ನ ಪ್ರಜೆಗಳಿಗೆ ಜಾಗರೂಕರಾಗಿರಲು ಮತ್ತು ಸುರಕ್ಷತಾ ಪ್ರೋಟೋಕಾಲ್‌ಗಳಿಗೆ ಗಮನ ಹರಿಸುವಂತೆ ಕೇಳಿಕೊಂಡಿದೆ. 

ಈ ಕುರಿತು ರಾಯಭಾರ ಕಚೇರಿಯು ಇಸ್ರೇಲ್ ನಲ್ಲಿರುವ ಭಾರತೀಯರಿಗೆ, ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ವಿನಂತಿಸಲಾಗಿದೆ ಮತ್ತು ಸ್ಥಳೀಯ ಅಧಿಕಾರಿಗಳು ಸಲಹೆ ನೀಡಿದಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಗಮನಿಸುವಂತೆ ಕೇಳಿಕೊಂಡಿದೆ.

ಅನಗತ್ಯವಾಗಿ ಹೊರಗೆ ಓಡಾಡದಂತೆ ಮತ್ತು ಸುರಕ್ಷತಾ ಕ್ರಮಗಳ ಮೇಲೆ ಹೆಚ್ಚಿನ ನಿಗಾ ಇರಿಸಿ. ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ (https://www.oref.org.il/en) ಅಥವಾ ಅವರ ಸನ್ನದ್ಧತೆಯ ಕರಪತ್ರವನ್ನು ನೋಡಿ. ತುರ್ತು ಸಂದರ್ಭದಲ್ಲಿ, +97235226748 ನಲ್ಲಿ ಸಂಪರ್ಕಿಸಿ ಅಥವಾ cons1.telaviva@mea.gov.in ನಲ್ಲಿ ಸಂದೇಶವನ್ನು ಕಳುಹಿಸಿ. ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿ ನಿಮ್ಮ ಸಹಾಯಕ್ಕೆ ಬರುತ್ತಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT