ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಹಳ್ಳಿಯೊಂದರಲ್ಲಿ ನೂರಾರು ಕೋತಿಗಳ ಮೃತದೇಹ ಪತ್ತೆ! 

ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಸುಮಾರು 100 ಮಂಗಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆಲಂಗಾಣ: ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಸುಮಾರು 100 ಮಂಗಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ತಮ್ಮ ಹೊಲಗಳ ಬಳಿ ಕೋತಿಗಳು ಮೃತಪಟ್ಟಿರುವುದನ್ನು ಗಮನಿಸಿದ ಮುನಿಗಡಪದ ಕೆಲವು ಗ್ರಾಮಸ್ಥರು ಸ್ಥಳೀಯ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದು, ತದನಂತರ ಅವರು ಪಶುವೈದ್ಯ ಇಲಾಖೆಗೆ ಮಾಹಿತಿ ನೀಡಿರುವುದಾಗಿ  ಅಧಿಕಾರಿಗಳು ತಿಳಿಸಿದ್ದಾರೆ. 

ಸಾವಿಗೆ ಕಾರಣ ತಿಳಿಯುವ ನಿಟ್ಟಿನಲ್ಲಿ ಸಾವನ್ನಪ್ಪಿದ್ದ ಕೋತಿಗಳ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಪಶುವೈದ್ಯಕೀಯ ಮತ್ತು ಪಶುಸಂಗೋಪನಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮಾದರಿಗಳನ್ನು ಹೈದರಾಬಾದ್‌ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ಕಾರಣ ತಿಳಿಯಬಹುದು ಎಂದು ಅವರು ಹೇಳಿದ್ದಾರೆ.

ಬೇರೆಡೆ ಮಂಗಗಳಿಗೆ ವಿಷ ಬೆರೆಸಿ ಕೊಂದು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಅವುಗಳ ಶವವನ್ನು ಗ್ರಾಮದ ಬಳಿ ಎಸೆಯಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ