ನವದೆಹಲಿ: ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸಿ ಕ್ಯಾಂಪಸ್‌ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನಾಲ್ವರು ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯ(ಎಎಂಯು)ದ ವಿದ್ಯಾರ್ಥಿಗಳ ವಿರುದ್ಧ ಅಲಿಗಢ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ಹಲವು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರಲ್ಲಿ ನಾಲ್ವರು ಎಂಎಂಯು ವಿದ್ಯಾರ್ಥಿಗಳ ಹೆಸರಿದೆ ಎಂದು ನಗರ ಎಸ್ಪಿ ಆರ್ ಶೇಖರ್ ಪಾಠಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆತಿಫ್, ಖಾಲಿದ್, ಕಮ್ರಾನ್ ಮತ್ತು ನವೇದ್ ಚೌಧರಿ ಎಂಬ ನಾಲ್ಕು ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 153 ಎ, 188 ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಡಕ್ ಪಾಯಿಂಟ್‌ನಿಂದ ಎಎಂಯು ಕ್ಯಾಂಪಸ್‌ನಲ್ಲಿರುವ ಬೇಬಿ ಸರ್ ಸೈಯದ್ ಗೇಟ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.
ಪ್ರತಿಭಟನಾಕಾರರು ತಮ್ಮ ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.