ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 
ದೇಶ

ದೆಹಲಿಯಲ್ಲಿ ಸಿಡಬ್ಲ್ಯುಸಿ ಸಭೆ ಆರಂಭ: ಚುನಾವಣಾ ತಂತ್ರ, ಜಾತಿ ಗಣತಿ ಪ್ರಮುಖ ಚರ್ಚೆ ವಿಷಯ; ಸಿಎಂ ಸಿದ್ದರಾಮಯ್ಯ ಭಾಗಿ

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ನಿರ್ಣಾಯಕ ಸಭೆ ಇಂದು ಸೋಮವಾರ ಇಲ್ಲಿ ಆರಂಭಗೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ಮತ್ತು ರಾಷ್ಟ್ರವ್ಯಾಪಿ ಜಾತಿ ಗಣತಿ ಕುರಿತು ಪಕ್ಷದ ವರಿಷ್ಠರು ಚರ್ಚೆ ನಡೆಸಲಿದ್ದಾರೆ.

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ನಿರ್ಣಾಯಕ ಸಭೆ ಇಂದು ಸೋಮವಾರ ಇಲ್ಲಿ ಆರಂಭಗೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ಮತ್ತು ರಾಷ್ಟ್ರವ್ಯಾಪಿ ಜಾತಿ ಗಣತಿ ಕುರಿತು ಪಕ್ಷದ ವರಿಷ್ಠರು ಚರ್ಚೆ ನಡೆಸಲಿದ್ದಾರೆ.

ಚುನಾವಣಾ ಆಯೋಗವು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ ದಿನದಂದು ಈ ಸಭೆ ನಡೆಯುತ್ತಿದ್ದು ಮಹತ್ವ ಪಡೆದಿದೆ. 

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಎಲ್ಲಾ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಉನ್ನತ ನಾಯಕರು ಚುನಾವಣಾ ಸಿದ್ಧತೆ ಬಗ್ಗೆ ಚರ್ಚಿಸಿದರು.

ರಾಷ್ಟ್ರವ್ಯಾಪಿ ಜಾತಿ ಗಣತಿ ಮತ್ತು ಅದರ ಪರಿಣಾಮಗಳ ಬಗ್ಗೆ ಪಕ್ಷವು ತನ್ನ ದೃಢ ನಿಲುವನ್ನು ಇಂದು ತಿಳಿಸಲಿದೆ. ಜಾತಿ ಗಣತಿಗೆ ತನ್ನ ಬೇಡಿಕೆಯನ್ನು ವ್ಯಕ್ತಪಡಿಸುವ ಬಗ್ಗೆ ಕಾಂಗ್ರೆಸ್‌ನಲ್ಲಿ ಕಳವಳಗಳಿವೆ, ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವಿರೋಧ ಪಕ್ಷವು ಇತರ ಹಿಂದುಳಿದ ವರ್ಗಗಳಿಗೆ (OBC) ಒತ್ತು ನೀಡುವ ಮೂಲಕ ಹಿಂದೂಗಳನ್ನು ವಿಭಜಿಸಲು ಪ್ರಯತ್ನಿಸುತ್ತಿದೆ.

ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ತನ್ನ ಸರ್ಕಾರಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (BRS) ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ನಿಂದ ಅಧಿಕಾರವನ್ನು ಪಡೆದುಕೊಳ್ಳಲು ನೋಡುತ್ತಿದೆ. 

ಕೆಲವು ವಿರೋಧ ಪಕ್ಷದ ನಾಯಕರು ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆ ಎದುರಿಸುತ್ತಿುರುವ ಸಮಯದಲ್ಲಿ ಸಿಡಬ್ಲ್ಯುಸಿ ಸಭೆಯು ನಡೆಯುತ್ತಿದೆ. ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ನಾಯಕ ಸಂಜಯ್ ಸಿಂಗ್ ಅವರ ಬಂಧನವಾಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಸ್ಥಾನ, ಛತ್ತೀಸ್‌ಗಢ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳು, ಚುನಾವಣೆಗೆ ಒಳಪಟ್ಟಿರುವ ರಾಜ್ಯಗಳ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರು ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿರುವ ಈ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಅವರು ಭಾಗವಹಿಸುತ್ತಿದ್ದಾರೆ.  ವರ್ಷಾಂತ್ಯದಲ್ಲಿ ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಂಣ ಮಿಜೋರಾಂ ರಾಜ್ಯಗಳಲ್ಲಿ ವಿಧಾನ ಸಭಾ ಚುನಾವಣೆ (Assembly polls) ನಡೆಯಲಿರುವುದರಿಂದ ತಯಾರಿ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಕಾರ್ಯಕ್ರಮ ಮೊದಲಾದ ವಿಷಯಗಳನ್ನು ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ಸಭೆ ಕರೆದಿದ್ದಾರೆ. 

ಕರ್ನಾಟಕ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಪಕ್ಷದ ವರಿಷ್ಠರೊಂದಿಗೆ ಪ್ರತ್ಯೇಕವಾಗಿ ಚರ್ಚಸಲಿದ್ದಾರೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿ ವಿವಾದ ಸೃಷ್ಟಿ ಮಾಡಿದ್ದಾರೆ. ಶಾಮನೂರು ವಿಷಯವಲ್ಲದೆ ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷದ ತಯಾರಿ, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷದ ಮೇಲಾಗವ ಪರಿಣಾಮ ಮೊದಲಾದ ಸಂಗತಿಗಳನ್ನು ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಬರ ಪರಿಹಾರ ನಿಧಿ ಹಾಗೂ ಕಾವೇರಿ ನದಿ ನೀರಿನ ಸಮಸ್ಯೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT