ಸಂಗ್ರಹ ಚಿತ್ರ 
ದೇಶ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ಪ್ರಕಟ ಸಾಧ್ಯತೆ

ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಲಿದೆ.

ನವದೆಹಲಿ: ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಲಿದೆ.

ಈ ಸಂಬಂಧ ಇಂದು ಮಧ್ಯಾಹ್ನ 12 ಗಂಟೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಾಹಿತಿ ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಚುನಾವಣಾ ಆಯೋಗವು ಸುಮಾರು 300 ವೀಕ್ಷಕರ ಸಭೆ ನಡೆಸಿತ್ತು. ಭಾನುವಾರದ ನಂತರ ಯಾವುದೇ ಸಮಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ, ತೆಲಂಗಾಣ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.

ಈ 5 ರಾಜ್ಯಗಳಲ್ಲಿ, ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಡಳಿತವಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸುತ್ತಿದೆ ಮತ್ತು ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರ್ಕಾರ ರಚಿಸಿದೆ. ಮಿಜೋರಾಂ ಸರ್ಕಾರದಲ್ಲಿರುವ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್) ಬಿಜೆಪಿಯ ಮಿತ್ರಪಕ್ಷವಾಗಿದೆ.

ಪ್ರಸ್ತುತ ಸರ್ಕಾರಗಳ ಅವಧಿ ಮಿಜೋರಾಂನಲ್ಲಿ ಡಿಸೆಂಬರ್ 17, 2023, ಮಧ್ಯಪ್ರದೇಶದಲ್ಲಿ ಜನವರಿ 6, ಛತ್ತೀಸ್‌ಗಢದಲ್ಲಿ ಜನವರಿ 3, ರಾಜಸ್ಥಾನದಲ್ಲಿ ಜನವರಿ 14, ತೆಲಂಗಾಣದಲ್ಲಿ ಜನವರಿ 16ಕ್ಕೆ ಪೂರ್ಣಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ