ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್. 
ದೇಶ

ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು 'ಸರಿಯಾದ ಸಮಯಕ್ಕೆ' ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ: ಇಸಿ

ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಸೋಮವಾರ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಬಳಿಕ ಈ ವಿಷಯ ತಿಳಿಸಿದರು.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಸೋಮವಾರ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಬಳಿಕ ಈ ವಿಷಯ ತಿಳಿಸಿದರು.

ಭದ್ರತಾ ಪರಿಸ್ಥಿತಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ಇತರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಆಯೋಗಕ್ಕೆ ಇದು 'ಸರಿಯಾದ ಸಮಯ' ಎಂದು ಅನ್ನಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಅವರು ಹೇಳಿದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ರಾಜೀವ್ ಕುಮಾರ್, ಉಚಿತ ಯೋಜನೆಗಳ ಘೋಷಣೆಗಳು ಯಾವಾಗಲೂ ಜನಪ್ರಿಯತೆಯ ಅಂಶವನ್ನು ಒಳಗೊಂಡಿರುತ್ತವೆ ಮತ್ತು ಈ ಉಚಿತಗಳಿಗೆ ಹಣ ಎಲ್ಲಿಂದ ಬರುತ್ತದೆ ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಹೇಳಿದರು.

ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನವೆಂಬರ್ 7 ರಿಂದ 30 ರವರೆಗೆ ವಿವಿಧ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಐದು ರಾಜ್ಯಗಳ ಮತ ಎಣಿಕೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. 

2024ರ ಲೋಕಸಭಾ ಚುನಾವಣೆಗೆ ಪಂಚ ರಾಜ್ಯಗಳ ಚುನಾವಣೆಯು ಸೆಮಿಫೈನಲ್ಸ್ ಎಂದೇ ಪರಿಗಣಿಸಲಾಗಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ನಡೆಯಲಿರುವ ವಿಧಾನಸಭೆ ಚುನಾವಣೆ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!