ನ್ಯೂಸ್‌ಕ್ಲಿಕ್ ಕಚೇರಿ 
ದೇಶ

ನ್ಯೂಸ್‌ಕ್ಲಿಕ್ ಪ್ರಕರಣ: ಪುರ್ಕಾಯಸ್ಥ, ಚಕ್ರವರ್ತಿಗೆ 10 ದಿನ ನ್ಯಾಯಾಂಗ ಬಂಧನ

ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ...

ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಂಧಿತ ಇಬ್ಬರು ಆರೋಪಿಗಳನ್ನು ಇಂದು ಮಧ್ಯಾಹ್ನ 2:50 ರ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಮುಂದೆ ಹಾಜರುಪಡಿಸಲಾಯಿತು.

ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಇಬ್ಬರಿಗೂ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕ ಕಳೆದ ಮಂಗಳವಾರ ಬಂಧಿಸಿದ್ದು, ದೆಹಲಿಯಲ್ಲಿರುವ ನ್ಯೂಸ್‌ಕ್ಲಿಕ್ ಕಚೇರಿಯನ್ನು ಪೊಲೀಸರು ಸೀಲ್ ಮಾಡಿದ್ದಾರೆ ಮತ್ತು  ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪತ್ರಕರ್ತರನ್ನು ವಿಚಾರಣೆಗೊಳಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT