ರಾಹುಲ್ ಗಾಂಧಿ 
ದೇಶ

ಇನ್ನೂ ಮದುವೆಯಾಗದಿರುವುದಕ್ಕೆ ಕಾರಣ ಬಹಿರಂಗಪಡಿಸಿದ ರಾಹುಲ್ ಗಾಂಧಿ! ವಿಡಿಯೋ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮದುವೆಯಾಗದಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ, ವಯಸ್ಸು 53 ಆದರೂ ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿ ಉಳಿದಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮದುವೆಯಾಗದಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ, ವಯಸ್ಸು 53 ಆದರೂ ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿ ಉಳಿದಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ. ಗಾಂಧಿಯವರ ಸಂವಾದದ ವೀಡಿಯೊವನ್ನು ಮಂಗಳವಾರ ಅವರ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಲಾಗಿದೆ.

' ನೀವು ತುಂಬಾ ಸ್ಮಾರ್ಟ್ ಹಾಗೂ ಗುಡ್ ಲುಕಿಂಗ್' ಇದ್ದರೂ ಯಾಕೆ ಇನ್ನೂ ಮದುವೆ ಬಗ್ಗೆ ಯೋಚಿಸಿಲ್ಲ? ಅಂತಾ ಯುವತಿಯೊಬ್ಬಳು ಕೇಳುತ್ತಾಳೆ. ಆಗ ತಕ್ಷಣವೇ  ಉತ್ತರಿಸಿದ ರಾಹುಲ್ ಗಾಂಧಿ, ನನ್ನ ಕೆಲಸ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಂಪೂರ್ಣವಾಗಿ ಸಿಕ್ಕಿಹಾಕಿಕೊಂಡಿದ್ದೇನೆ. ಹಾಗಾಗಿ ಮದುವೆಯಾಗಿಲ್ಲ ಎನ್ನುತ್ತಾರೆ. 

 ರಾಹುಲ್ ಅವರ ನೆಚ್ಚಿನ ತಿನಿಸುಗಳ ಬಗ್ಗೆ ಕೇಳಿದಾಗ, ಹಾಗಲಕಾಯಿ, ಬಟಾಣಿ ಮತ್ತು ಪಾಲಕ್ ಹೊರತುಪಡಿಸಿ ಎಲ್ಲವನ್ನೂ ಚೆನ್ನಾಗಿ ತಿನ್ನುತ್ತೇನೆ. ನಾನು ಯಾವಾಗಲೂ ಹೊಸ ಸ್ಥಳಗಳನ್ನು ನೋಡಲು ಇಷ್ಟಪಡುತ್ತೇನೆ ಎಂದು ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋಗುತ್ತಾರೆ. ಮುಖದ ಸೌಂದರ್ಯ ಕಾಪಾಡಲು ಏನನ್ನು ಹಚ್ಚುತ್ತಿರಾ? ಎಂದು ಮತ್ತೊಬ್ಬರು ಕೇಳುತ್ತಾರೆ. ಅದಕ್ಕೆ  ಉತ್ತರಿಸಿದ ರಾಹುಲ್, ಯಾವುದೇ ಕ್ರಿಮ್ ಅಥವಾ ಸೋಪ್ ಬಳಸುವುದಿಲ್ಲ. ನೀರಿನಿಂದ ಮಾತ್ರ ತೊಳೆಯುತ್ತೇನೆ ಎಂದು ತಿಳಿಸಿದರು. 

ಹೀಗೆ ಸಮಾಜದಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ, ಆರ್ಥಿಕ ಸ್ವಾತಂತ್ರ್ಯ ಸೇರಿದಂತೆ ಹಲವು ಪ್ರಶ್ನೆಗಳು ರಾಹುಲ್ ಗಾಂಧಿ ಅವರಿಗೆ ಎದುರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಸಮಚಿತ್ತದಿಂದಲೇ ರಾಹುಲ್ ಗಾಂಧಿ ಉತ್ತರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್