ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ ವಿಧಾನಸಭೆ ಚುನಾವಣೆ: ದಿನಾಂಕ ಬದಲಾವಣೆ, ನವೆಂಬರ್ 25ಕ್ಕೆ ಮತದಾನ!

ಭಾರತೀಯ ಚುನಾವಣಾ ಆಯೋಗ ರಾಜಸ್ಥಾನ ವಿಧಾನಸಭಾ ಚುನಾವಣೆಯ ದಿನಾಂಕವನ್ನು ನವೆಂಬರ್ 23 ರಿಂದ ನವೆಂಬರ್ 25 ಕ್ಕೆ ಬುಧವಾರ ಬದಲಾಯಿಸಿದೆ. 

ನವದೆಹಲಿ: ಭಾರತೀಯ ಚುನಾವಣಾ ಆಯೋಗ ರಾಜಸ್ಥಾನ ವಿಧಾನಸಭಾ ಚುನಾವಣೆಯ ದಿನಾಂಕವನ್ನು ನವೆಂಬರ್ 23 ರಿಂದ ನವೆಂಬರ್ 25 ಕ್ಕೆ ಬುಧವಾರ ಬದಲಾಯಿಸಿದೆ. 

ನವೆಂಬರ್ 23 ರಂದು ಮದುವೆ, ಸಾಮಾಜಿಕ ನಿಶ್ಚಿತಾರ್ಥದಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಗುವುದರಿಂದ ಜನರಿಗೆ ಅನಾನುಕೂಲತೆ  ಉಂಟಾಗಬಹುದು, ಚುನಾವಣೆ ವೇಳೆಯಲ್ಲಿ ಜನರು ಮತದಾನದಲ್ಲಿ ಭಾಗವಹಿಸದೆ ಮತದಾನ ಪ್ರಮಾಣ ಕಡಿಮೆಯಾಗಬಹುದೆಂದು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ಅಭಿಪ್ರಾಯ ಕೇಳಿಬಂದಿತ್ತು. ಇವುಗಳನ್ನು ಪರಿಗಣಿಸಿ ಚುನಾವಣಾ ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 

ಈ ಎಲ್ಲಾ ಅಂಶಗಳು ಮತ್ತು ಆದ್ಯತೆಗಳನ್ನು ಪರಿಗಣಿಸಿದ ಆಯೋಗವು, ನವೆಂಬರ್ 23, 2023 (ಗುರುವಾರ) ರಿಂದ ನವೆಂಬರ್ 25, 2023 (ಶನಿವಾರ) ಕ್ಕೆ ಮತದಾನದ ದಿನಾಂಕವನ್ನು ಬದಲಾಯಿಸಲು ನಿರ್ಧರಿಸಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ಮಾಹಿತಿ ನೀಡಿದೆ.

ಚುನಾವಣಾ ಆಯೋಗವು ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿತ್ತು. ಈ ಹಿಂದೆ  ರಾಜಸ್ಥಾನದಲ್ಲಿ ನವೆಂಬರ್ 23 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT