ಕಾರ್ತ್ಯಾಯಿನಿ ಅಮ್ಮ 
ದೇಶ

ಕೇರಳದ ಸಾಕ್ಷರತಾ 'ರಾಯಭಾರಿ': ಶತಾಯುಷಿ ಕಾರ್ತ್ಯಾಯನಿ ಅಮ್ಮ ಇನ್ನಿಲ್ಲ

96ನೇ ವಯಸ್ಸಿನಲ್ಲಿ ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ, ನಾರಿಶಕ್ತಿ ಪುರಸ್ಕೃತ ಕಾರ್ತ್ಯಾಯನಿ ಅಮ್ಮ ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರಿಗೆ 101 ವರ್ಷ ವಯಸ್ಸಾಗಿತ್ತು.

ತಿರುವನಂತಪುರ:  96ನೇ ವಯಸ್ಸಿನಲ್ಲಿ ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ, ನಾರಿಶಕ್ತಿ ಪುರಸ್ಕೃತ ಕಾರ್ತ್ಯಾಯನಿ ಅಮ್ಮ ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರಿಗೆ 101 ವರ್ಷ ವಯಸ್ಸಾಗಿತ್ತು.

ಆಳಪ್ಪುಳ ಜಿಲ್ಲೆಯ ಚೆಪ್ಪಾಡ್‌ ಗ್ರಾಮದ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 101 ವಯಸ್ಸಾಗಿತ್ತು. ಪಾರ್ಶ್ವವಾಯು ತುತ್ತಾಗಿದ್ದ ಅವರು ಕೆಲ ದಿನಗಳಿಂದ ಹಾಸಿಗೆ ಹಿಡಿದಿದ್ದರು. 96ನೇ ವಯಸ್ಸಿನಲ್ಲಿ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ‘ಅತಿ ಹಿರಿಯ ವಿದ್ಯಾರ್ಥಿ’ ಎನಿಸಿಕೊಂಡಿದ್ದರು. ಅಲ್ಲದೆ ನಾಲ್ಕನೇ ತರಗತಿಗೆ ಸಮಾನವಾದ ‘ಅಕ್ಷರಲಕ್ಷಂ’ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದರು.

ಸಾಕ್ಷರತಾ ಪರೀಕ್ಷೆಯಲ್ಲಿ ರ್ಯಾಂಕ್​ ಗಳಿಸಿದ ಹಿನ್ನೆಲೆ 2018ರಲ್ಲಿ ಕಾತ್ಯಾಯನಿ ಅಮ್ಮಗೆ ಕೇಂದ್ರ ಸರ್ಕಾರವು ನಾರಿಶಕ್ತಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಬಳಿಕ ಇವರನ್ನು 53 ಸದಸ್ಯ ರಾಷ್ಟ್ರಗಳಲ್ಲಿ ದೂರ ಶಿಕ್ಷಣ ಪ್ರಚಾರಕ್ಕಾಗಿ ಕಾಮನ್​ವೆಲ್ತ್​ ಲರ್ನಿಂಗ್​ನ ಸದ್ಭಾವನಾ ರಾಯಭಾರಿಯನ್ನಾಗಿ ಆಯ್ಕೆ ಮಾಡಲಾಯಿತು.

ಈ ಪರೀಕ್ಷೆಗೆ ಹಾಜರಾದ 43,330 ಅಭ್ಯರ್ಥಿಗಳ ಪೈಕಿ ಕಾರ್ತ್ಯಾಯಿನಿ ಅಮ್ಮ ಅತಿ ಹಿರಿಯರೆನಿಸಿಕೊಂಡಿದ್ದರು. 2020ರ ಮಾರ್ಚ್‌ನಲ್ಲಿ ಮಹಿಳಾ ದಿನದಂದು ಆಗಿನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಂದ ನಾರಿಶಕ್ತಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಕಾರ್ತಾಯಿನಿ ಅಮ್ಮ ಅವರ ಸಾವಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸಂತಾಪ ವ್ಯಕ್ತಪಡಿಸಿದ್ದಾರೆ. ಹತ್ತನೇ ತರಗತಿ ತೇರ್ಗಡೆಗೊಂಡು ಕೆಲಸ ಪಡೆಯಬೇಕು ಎಂದು ತಮ್ಮನ್ನು ಭೇಟಿ ಮಾಡಿದ ವೇಳೆ ಕಾರ್ತಾಯಿನಿ ಅಮ್ಮ ಆಸೆ ವ್ಯಕ್ತಪಡಿಸಿದ್ದನ್ನು ಪಿಣರಾಯಿ ನೆನಪಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT