ಸಾಂದರ್ಭಿಕ ಚಿತ್ರ 
ದೇಶ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ 'ಶಾಹಿದ್ ಲತೀಫ್' ಪಾಕಿಸ್ತಾನದಲ್ಲಿ ಹತ್ಯೆ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ ನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ.

ನವದೆಹಲಿ: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ ನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ನಂತರ ಲತೀಫ್ ನನ್ನು 2010 ರಲ್ಲಿ ವಾಘಾ ಮೂಲಕ ಗಡಿಪಾರು ಮಾಡಲಾಯಿತು. 1994ರ ನವೆಂಬರ್ 12ರಂದು ಆತನನ್ನು ಬಂಧಿಸಲಾಗಿತ್ತು.

ಲತೀಫ್ ನನ್ನು ಭಾರತ ಸರ್ಕಾರವು ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬೇಕಾಗಿದ್ದ. 1999ರಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಭಾಗಿಯಾಗಿದ್ದ.

2010 ರಲ್ಲಿ ಬಿಡುಗಡೆಯಾದ ನಂತರ ಲತೀಫ್ ಪಾಕಿಸ್ತಾನದ ಜಿಹಾದಿ ಕಾರ್ಖಾನೆಗೆ ಹಿಂತಿರುಗಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ತನಿಖೆ ಹೇಳುತ್ತದೆ. ಭಾರತ ಸರ್ಕಾರದಿಂದ ಆತನನ್ನು ಮೋಸ್ಟ್​ ವಾಂಟೆಡ್ ಭಯೋತ್ಪಾದಕ ಎಂದು ಪಟ್ಟಿ ಮಾಡಲಾಗಿತ್ತು.

41 ವರ್ಷದ ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಪ್ರಮುಖ ಸದಸ್ಯನಾಗಿದ್ದ. 2016ರ ಜನವರಿ 2ರಂದು ನಡೆದ ಪಠಾಣ್​ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದ. ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿ, ಅದನ್ನು ಕಾರ್ಯಗತಗೊಳಿಸಲು ನಾಲ್ವರು ಜೆಇಎಂ ಭಯೋತ್ಪಾದಕರನ್ನು ಪಠಾಣ್‌ಕೋಟ್‌ಗೆ ಕಳುಹಿಸಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT