ದೇಶ

ವಿಶ್ವಕಪ್ ಟೂರ್ನಿ: ಪಾಕ್ ವಿರುದ್ಧ ಐತಿಹಾಸಿಕ ಗೆಲುವು: ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ 

Srinivas Rao BV

ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. 

ಐತಿಹಾಸಿಕ ಗೆಲುವು ಸಾಧಿಸಿರುವ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಒಡಿಐ ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಪಾಕ್ ವಿರುದ್ಧದ ಪ್ರಾಬಲ್ಯವನ್ನು ಭಾರತ ಈ ಗೆಲುವಿನ ಮೂಲಕ ಮುಂದುವರೆಸಿದೆ.

 
ಇದು ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಟೂರ್ನಿಯಲ್ಲಿ 8 ನೇ ಗೆಲುವಾಗಿದೆ. ಅಹಮದಾಬಾದ್‌ನಲ್ಲಿ ಪಾಕಿಸ್ತಾನದ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದರು. ಜಸ್ಪ್ರೀತ್ ಬುಮ್ರಾ 7 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಅವರು ಮೇಡನ್ ಓವರ್ ಬೌಲ್ ಮಾಡಿದರು. ಮೊಹಮ್ಮದ್ ಸಿರಾಜ್ 8 ಓವರ್ ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರು.

ಹಾರ್ದಿಕ್ ಪಾಂಡ್ಯ 6 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ 10 ಓವರ್ ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರು. ರವೀಂದ್ರ ಜಡೇಜಾ 9.5 ಓವರ್ ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು. 

SCROLL FOR NEXT