ಪ್ರಧಾನಿ ನರೇಂದ್ರ ಮೋದಿ 
ದೇಶ

ಭಾರತ-ಶ್ರೀಲಂಕಾ ದೋಣಿ ಸೇವೆ: ರಾಜತಾಂತ್ರಿಕತೆಯ ಹೊಸ ಅಧ್ಯಾಯ ಆರಂಭ- ಪ್ರಧಾನಿ ಮೋದಿ

ಭಾರತದ ನಾಗಪಟ್ಟಣಂನಿಂದ ಶ್ರೀಲಂಕಾಕ್ಕೆ ಪ್ರಯಾಣಿಕ ದೋಣಿ ಸೇವೆಗೆ ಶನಿವಾರ ಚಾಲನೆ ದೊರೆತಿದ್ದು, ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ನವದೆಹಲಿ: ಭಾರತದ ನಾಗಪಟ್ಟಣಂನಿಂದ ಶ್ರೀಲಂಕಾಕ್ಕೆ ಪ್ರಯಾಣಿಕ ದೋಣಿ ಸೇವೆಗೆ ಶನಿವಾರ ಚಾಲನೆ ದೊರೆತಿದ್ದು, ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ನಾಗಪಟ್ಟಣಂ ಮತ್ತು ಕಂಕೆಸಂತುರೈ ನಡುವೆ ದೋಣಿ ಸೇವೆ ಪ್ರಾರಂಭವಾಗಿರುವುದು ನಮ್ಮ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲು ಆಗಿದೆ. ಇದರಿಂದ ಉಭಯ ದೇಶಗಳ ನಡುವೆ ಸಂಪರ್ಕ ಹಾಗೂ ವ್ಯಾಪಾರಕ್ಕೆ ಅನುಕೂಲವಾಗಲಿದ್ದು, ರಾಷ್ಟ್ರಗಳ ನಡುವಿನ ದೀರ್ಘಕಾಲದ ಬಾಂಧವ್ಯವನ್ನು ಬಲಪಡಿಸುತ್ತದೆ ಎಂದು ಮೋದಿ ಒತ್ತಿ ಹೇಳಿದ್ದಾರೆ. 

ಕವಿ ಸುಬ್ರಮಣ್ಯ ಭಾರತಿಯ ಸಿಂಧು ನದಿಯ ಮಿಸಾಯಿ ಕವಿತೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, “ಮಹಾ ಕವಿ ಸುಬ್ರಮಣ್ಯ ಭಾರತಿ  ತಮ್ಮ ಸಿಂಧು ನದಿಯ ಮಿಸಾಯಿ ಹಾಡಿನಲ್ಲಿ ನಮ್ಮ ಎರಡು ದೇಶಗಳನ್ನು (ಭಾರತ ಮತ್ತು ಶ್ರೀಲಂಕಾ) ಸಂಪರ್ಕಿಸುವ ಸೇತುವೆಯ ಬಗ್ಗೆ ಮಾತನಾಡಿದ್ದಾರೆ. ಈ ದೋಣಿ ಸೇವೆಯು ಎಲ್ಲಾ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಪರ್ಕಗಳನ್ನು ಜೀವಂತವಾಗಿ ತರುತ್ತದೆ ಎಂದಿದ್ದಾರೆ. 

ಶ್ರೀಲಂಕಾ ಅಧ್ಯಕ್ಷ ವಿಕ್ರಮಸಿಂಘೆ ಅವರ ಇತ್ತೀಚಿನ ಭೇಟಿಯ ಸಂದರ್ಭದಲ್ಲಿ ಜಂಟಿ ಆರ್ಥಿಕ ಪಾಲುದಾರಿಕೆಗಾಗಿ ವಿಷನ್ ಡಾಕ್ಯುಮೆಂಟ್  ಅಳವಡಿಸಿಕೊಂಡಿದ್ದೇವೆ. ಸಂಪರ್ಕ ಈ ಪಾಲುದಾರಿಕೆಯ ಕೇಂದ್ರ ವಿಷಯವಾಗಿದೆ. ಇದು ನಮ್ಮ ದೇಶಗಳನ್ನು ಹತ್ತಿರ ತರುವುದಕ್ಕಾಗಿ, ಇದು ವ್ಯಾಪಾರ, ಪ್ರವಾಸೋದ್ಯಮ ಮತ್ತು ಜನರ-ಜನರ ನಡುವಿನ ಸಂಬಂಧವನ್ನು ಹೆಚ್ಚಿಸುತ್ತದೆ. ಇದರಿಂದ ಎರಡೂ ದೇಶಗಳ ಯುವಜನರಿಗೆ ಉದ್ಯೋಗವಕಾಶ ಸೃಷ್ಟಿಸುತ್ತದೆ ಎಂದು ಹೇಳಿದರು. 

2015 ರಲ್ಲಿ ದೆಹಲಿ ಮತ್ತು ಕೊಲಂಬೊ ನಡುವೆ ನೇರ ವಿಮಾನವನ್ನು ಪ್ರಾರಂಭಿಸಲಾಯಿತು. ನಂತರ, ಮೊದಲ ಅಂತರಾಷ್ಟ್ರೀಯ ವಿಮಾನ ಶ್ರೀಲಂಕಾದಿಂದ ಯಾತ್ರಿಕರ ಪಟ್ಟಣವಾದ ಕುಶಿನಗರಕ್ಕೆ ಬಂದಿಳಿಯಿತು. ನಾಗಪಟ್ಟಿಣಂ ಮತ್ತು ಕಂಕಸಂತುರೈ ನಡುವಿನ ದೋಣಿ ಸೇವೆಯು ಈ ದಿಕ್ಕಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. 

ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ  ಮಾತನಾಡಿ, ಭಾರತ ಮತ್ತು ಶ್ರೀಲಂಕಾ ನಡುವಿನ ಸಂಪರ್ಕವನ್ನು ಹೆಚ್ಚಿಸುವಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ. ಉತ್ತರ ಯುದ್ಧದಿಂದಾಗಿ ಉಭಯ ದೇಶಗಳ ನಡುವಿನ ಸಂಪರ್ಕವು ಅಸ್ತವ್ಯಸ್ಥವಾಗಿತ್ತು.  ಈಗ ಶಾಂತಿ ಮರಳಿದೆ ಮತ್ತು ನಾವು  ಸಂಪರ್ಕವನ್ನು ಮರುಸ್ಥಾಪಿಸಬಹುದು, ಇದನ್ನು ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸಿದ್ದೇನೆ ಮತ್ತು ಈ ಸಂಪರ್ಕವನ್ನು ಮರುಸ್ಥಾಪಿಸುವಲ್ಲಿ ಅವರು ವಹಿಸಿದ ಪಾತ್ರಕ್ಕಾಗಿ ನಾನು ಅವರಿಗೆ ಮತ್ತು ಭಾರತೀಯ ಹಡಗು ನಿಗಮಕ್ಕೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT