ಭಾರತೀಯ ಪ್ರಜೆಗಳು 
ದೇಶ

ಆಪರೇಷನ್ ಅಜಯ್: ಇಸ್ರೇಲ್ ನಿಂದ 2ನೇ ವಿಮಾನದಲ್ಲಿ ನವದೆಹಲಿಗೆ ಬಂದಿಳಿದ 235 ಭಾರತೀಯರು!

ಇಸ್ರೇಲ್-ಹಮಾಸ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಇಸ್ರೇಲ್‌ನಿಂದ 235 ಭಾರತೀಯ ಪ್ರಜೆಗಳನ್ನು ಕರೆತರುವ 2ನೇ ವಿಮಾನ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ನಿನ್ನೆ  ಆಪರೇಷನ್ ಅಜಯ್ ಕಾರ್ಯಾಚರಣೆಯಡಿ 212 ಭಾರತೀಯ ಪ್ರಜೆಗಳನ್ನು ಸಂಘರ್ಷ ಪೀಡಿತ ದೇಶದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು. 

ನವದೆಹಲಿ: ಇಸ್ರೇಲ್-ಹಮಾಸ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಇಸ್ರೇಲ್‌ನಿಂದ 235 ಭಾರತೀಯ ಪ್ರಜೆಗಳನ್ನು ಕರೆತರುವ 2ನೇ ವಿಮಾನ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ನಿನ್ನೆ  ಆಪರೇಷನ್ ಅಜಯ್ ಕಾರ್ಯಾಚರಣೆಯಡಿ 212 ಭಾರತೀಯ ಪ್ರಜೆಗಳನ್ನು ಸಂಘರ್ಷ ಪೀಡಿತ ದೇಶದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು. 

ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಭಾರತೀಯ ಪ್ರಜೆಗಳನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ರಾಜಕುಮಾರ್ ರಂಜನ್ ಸಿಂಗ್ ಬರಮಾಡಿಕೊಂಡರು.

ಇದಕ್ಕೂ ಮುನ್ನಾ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ 235 ಭಾರತೀಯರನ್ನು ಹೊತ್ತ ವಿಮಾನ ಇಸ್ರೇಲ್ ನ ಟೆಲ್ ಅವೀವ್ ನಿಂದ ಟೇಕ್ ಆಫ್ ಆಗುತ್ತಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾಹಿತಿ ಹಂಚಿಕೊಂಡಿದ್ದರು. 

ಇಸ್ರೇಲ್‌ನಿಂದ ಸಿಲುಕಿರುವ ನಾಗರಿಕರನ್ನು ಮರಳಿ ಕರೆತರಲು ಸರ್ಕಾರ ಅಕ್ಟೋಬರ್ 11 ರಂದು ‘ಆಪರೇಷನ್ ಅಜಯ್’ ಕಾರ್ಯಾಚರಣೆ ಪ್ರಾರಂಭಿಸಿತು. ಅಕ್ಟೋಬರ್ 7 ರಂದು ಯುದ್ಧ ಪ್ರಾರಂಭವಾದಾಗ ಏರ್ ಇಂಡಿಯಾ ಮತ್ತು ಇತರ ಏರ್‌ಲೈನ್ಸ್ ತನ್ನ ಎಲ್ಲಾ ವಾಣಿಜ್ಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದ ನಂತರ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ವಿಶೇಷ ಚಾರ್ಟರ್ಡ್ ವಿಮಾನಗಳು ಭಾರತೀಯರನ್ನು ಮರಳಿ ಕರೆತರುತ್ತಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT