ಚಂದ್ರಬಾಬು ನಾಯ್ಡು 
ದೇಶ

ಆಂಧ್ರಪ್ರದೇಶ: ಜೈಲಿನಲ್ಲಿ ಚಂದ್ರಬಾಬು ನಾಯ್ಡುಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಕೋರ್ಟ್ ಅನುಮತಿ 

ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಅಮರಾವತಿಯ ಸ್ಥಳೀಯ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಅಮರಾವತಿಯ ಸ್ಥಳೀಯ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ. ಈ ಸಂಬಂಧ ನಾಯ್ಡು ಪರ ವಕೀಲರ ತಂಡವು ಶನಿವಾರ ವಿಜಯವಾಡ ಎಸಿಬಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. 

"ರಾಜಮಹೇಂದ್ರವರಂನ ಸರ್ಕಾರಿ ಜನರಲ್ ಆಸ್ಪತ್ರೆಯ ವೈದ್ಯರ ತಂಡದ ವರದಿಯನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರ ಚರ್ಮದ ಸಮಸ್ಯೆ ತಡೆಯಲು ಅವರ ಕೋಣೆಯಲ್ಲಿ ಹವಾನಿಯಂತ್ರಣವನ್ನು ಶೀಘ್ರವಾಗಿ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಶನಿವಾರ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ನಾಯ್ಡು ಅವರನ್ನು ಪರೀಕ್ಷಿಸಿದ ವೈದ್ಯರ ತಂಡವು ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಆಸ್ಪತ್ರೆಗೆ ಸ್ಥಳಾಂತರಿಸುವ ಅಗತ್ಯವಿಲ್ಲ ಆದರೆ, ಹವಾನಿಯಂತ್ರಿತ ಸೌಲಭ್ಯದ ಅಗ್ಯವಿದೆ ಎಂದು ಹೇಳಿದ್ದರು. ಬಂಧನಕ್ಕೊಳಗಾದ ಒಂದು ತಿಂಗಳ ನಂತರ, ನ್ಯಾಯಾಲಯವು ನಾಯ್ಡುಗೆ ಹವಾನಿಯಂತ್ರಣ ಸೌಲಭ್ಯವನ್ನು ಅನುಮತಿಸಿದೆ.  ನಾಯ್ಡು ಅವರು ರಾಜಮಹೇಂದ್ರವರಂ ಸೆಂಟ್ರಲ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT