ಅಗ್ನಿವೀರ್‌ ಅಮೃತ್‌ಪಾಲ್‌ ಸಿಂಗ್ 
ದೇಶ

ಅಗ್ನಿವೀರ್ ಅಮೃತಪಾಲ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡದ್ದರಿಂದ ಮಿಲಿಟರಿ ಗೌರವ ನೀಡಲಾಗಿಲ್ಲ: ಸೇನೆ ಸ್ಪಷ್ಟನೆ

ಅಗ್ನಿವೀರ್‌ ಅಮೃತ್‌ಪಾಲ್‌ ಸಿಂಗ್ ಕರ್ತವ್ಯದಲ್ಲಿದ್ದಾಗಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ, ಅಂತ್ಯಕ್ರಿಯೆಯಲ್ಲಿ ಹುತಾತ್ಮರಿಗೆ ನೀಡುವ ಮಿಲಿಟರಿ ಗೌರವಗಳನ್ನು ನೀಡಲಾಗಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ.

ನವದೆಹಲಿ: ಅಗ್ನಿವೀರ್‌ ಅಮೃತ್‌ಪಾಲ್‌ ಸಿಂಗ್ ಕರ್ತವ್ಯದಲ್ಲಿದ್ದಾಗಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ, ಅಂತ್ಯಕ್ರಿಯೆಯಲ್ಲಿ ಹುತಾತ್ಮರಿಗೆ ನೀಡುವ ಮಿಲಿಟರಿ ಗೌರವಗಳನ್ನು ನೀಡಲಾಗಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ.

ಅಗ್ನಿಪಥ್ ಮೂಲಕ ಸೇನೆಗೆ ಸೇರಿದ್ದರಿಂದ ಅಂತ್ಯಕ್ರಿಯೆ ವೇಳೆ ಮಿಲಿಟರಿ ಗೌರವ ನೀಡಲಾಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸೇನೆ, ಸೈನಿಕರು ಅಗ್ನಿಪಥ್ ಯೋಜನೆಯ ಅನುಷ್ಠಾನಕ್ಕೆ ಮೊದಲು ಅಥವಾ ನಂತರ ಪಡೆಗೆ ಸೇರಿದರೂ ಅವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಪ್ರತಿಪಾದಿಸಿದೆ.

ಸೇನೆಯ ನಗ್ರೋಟಾ-ಪ್ರಧಾನ ಕಚೇರಿಯ ವೈಟ್ ನೈಟ್ ಕಾರ್ಪ್ಸ್, ಶನಿವಾರದಂದು ರಜೌರಿ ಸೆಕ್ಟರ್‌ನಲ್ಲಿ ಗಸ್ತಿನಲ್ಲಿದ್ದಾಗ ಅಮೃತ್‌ ಪಾಲ್‌ ಸ್ವತಃ ಗುಂಡು ಹಾರಿಸಿಕೊಂಡಿದ್ದಾರೆ,

ಸಿಂಗ್ ಅವರ ದುರದೃಷ್ಟಕರ ಸಾವಿಗೆ ಸಂಬಂಧಿಸಿದ ಸಂಗತಿಗಳ ಬಗ್ಗೆ ಕೆಲವು ‘ತಪ್ಪು ತಿಳಿವಳಿಕೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಎಸ್ಕಾರ್ಟ್‌ಗಳೊಂದಿಗೆ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ’ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ