ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರವೀರ್ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ 
ದೇಶ

ನ್ಯೂಸ್‌ಕ್ಲಿಕ್ ಪ್ರಕರಣ: ಯುಎಪಿಎ ಅಡಿಯಲ್ಲಿ ಬಂಧನ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಪುರಕಾಯಸ್ಥ, ಚಕ್ರವರ್ತಿ

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ತಮ್ಮ ಬಂಧನವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಪುರಕಾಯಸ್ಥ ಮತ್ತು ಚಕ್ರವರ್ತಿ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಮನವಿಯನ್ನು ಗಮನದಲ್ಲಿಟ್ಟುಕೊಂಡು, ಈ ವಿಷಯದ ತುರ್ತು ವಿಚಾರಣೆ ಅಗತ್ಯವಿದೆ ಮತ್ತು ಪ್ರಕರಣದ ದಾಖಲೆಗಳನ್ನು ಸಲ್ಲಿಸುವಂತೆ ಕೇಳಿದೆ.

'ಇದು ನ್ಯೂಸ್‌ಕ್ಲಿಕ್ ವಿಷಯ. ಪತ್ರಕರ್ತರು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಆರೋಪಿಗಳಲ್ಲಿನ ಒಬ್ಬರಿಗೆ 75 ವರ್ಷ' ಎಂದು ಸಿಬಲ್ ಹೇಳಿದರು.

ಸಿಜೆಐ ಅವರು ಈ ವಿಷಯವನ್ನು ವಿಚಾರಣೆಗಾಗಿ ಪಟ್ಟಿ ಮಾಡುವುದಾಗಿ ಹೇಳಿದರು.

ತಮ್ಮ ಬಂಧನ ಮತ್ತು ಏಳು ದಿನಗಳ ಪೊಲೀಸ್ ಕಸ್ಟಡಿಯನ್ನು ಪ್ರಶ್ನಿಸಿ ಪುರಕಾಯಸ್ಥ ಮತ್ತು ಚಕ್ರವರ್ತಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಧ್ಯಂತರ ಪರಿಹಾರವಾಗಿ ತಕ್ಷಣವೇ ಬಿಡುಗಡೆ ಮಾಡುವಂತೆ ಕೋರಿದ್ದರು. ಆದರೆ, ಅಕ್ಟೋಬರ್ 13 ರಂದು, ಈ ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಪೀಠವು, ಇಬ್ಬರ ಮನವಿಯನ್ನು ವಜಾಗೊಳಿಸಿತು.

ಪುರಕಾಯಸ್ಥ ಮತ್ತು ಚಕ್ರವರ್ತಿಯನ್ನು ಅಕ್ಟೋಬರ್ 3ರಂದು ದೆಹಲಿ ಪೊಲೀಸರ ವಿಶೇಷ ಘಟಕವು ಬಂಧಿಸಿತ್ತು. ಚೀನಾ ಪರ ಪ್ರಚಾರ ಮಾಡಲು ಹಣ ಪಡೆದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ. ಇಬ್ಬರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಕ್ಟೋಬರ್ 10 ರಂದು ವಿಚಾರಣಾ ನ್ಯಾಯಾಲಯವು ಅವರನ್ನು 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT