ವಸುಂದರಾ ರಾಜೆ 
ದೇಶ

ರಾಜಸ್ಥಾನ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ, ವಸುಂಧರಾ ರಾಜೆಗೂ ಟಿಕೆಟ್

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಶನಿವಾರ ಇನ್ನೂ 83 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಜಲ್ರಾಪಟನ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಶನಿವಾರ ಇನ್ನೂ 83 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಜಲ್ರಾಪಟನ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.
  
ಮೊದಲ ಪಟ್ಟಿಯಲ್ಲಿ ಮಾಜಿ ಉಪ ರಾಷ್ಟ್ರತಿ ಭೈರೋನ್ ಸಿಂಗ್ ಶೇಖಾವತ್ ಅವರ ಅಳಿಯ, ಐದು ಬಾರಿ ಶಾಸಕರಾಗಿರುವ ನರ್ಪತ್ ಸಿಂಗ್ ರಾಜ್ವಿ ಅವರಿಗೆ ವಿಧ್ಯಾಧರ್ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು. ಇದಕ್ಕೆ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾದ ನಂತರ ಎರಡನೇ ಪಟ್ಟಿಯಲ್ಲಿ ರಾಜ್ವಿ ಅವರನ್ನು ಚಿತ್ತೋರಗಢದಿಂದ ಕಣಕ್ಕಿಳಿಸಲಾಗಿದೆ.

ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಮಹಾರಾಣಾ ಪ್ರತಾಪ್ ಸಿಂಗ್ ಅವರ ವಂಶಸ್ಥರಾದ ವಿಶ್ವರಾಜ್ ಸಿಂಗ್ ಮೇವಾರ್ ಅವರಿಗೂ ಬಿಜೆಪಿ ಟಿಕೆಟ್ ನೀಡಲಾಗಿದೆ. ಮೇವಾರ್ ಅವರು ನಾಥದ್ವಾರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಪೂನಿಯಾ ಅವರು ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಅಂಬರ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT