ಪ್ಯಾಲೆಸ್ಟೈನ್ ಜನರಿಗೆ ಸುಮಾರು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ರವಾನಿಸುತ್ತಿರುವ ಭಾರತ.. 
ದೇಶ

ಇಸ್ರೇಲ್-ಹಮಾಸ್ ಯುದ್ಧ: ಪ್ಯಾಲೆಸ್ತೀನ್‌ಗೆ ಮಾನವೀಯ ನೆರವು ಕಳುಹಿಸಿದ ಭಾರತ, ಈಜಿಪ್ಟ್​ನ ರಫಾ ಗಡಿಯ ಮೂಲಕ ರವಾನೆ

ಯುದ್ಧಪೀಡಿತ ಗಾಜಾಗೆ ಜಗತ್ತಿನಾದ್ಯಂತ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಮಾನವೀಯ ಆಧಾರದ ಮೇಲೆ ಭಾರತ ಕೂಡ ವೈದ್ಯಕೀಯ ಅಗತ್ಯಗಳು ಮತ್ತು ವಿಪತ್ತು ಪರಿಹಾರ ವಸ್ತುಗಳನ್ನು ರವಾನಿಸಿದೆ.

ನವದೆಹಲಿ: ಯುದ್ಧಪೀಡಿತ ಗಾಜಾಗೆ ಜಗತ್ತಿನಾದ್ಯಂತ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಮಾನವೀಯ ಆಧಾರದ ಮೇಲೆ ಭಾರತ ಕೂಡ ವೈದ್ಯಕೀಯ ಅಗತ್ಯಗಳು ಮತ್ತು ವಿಪತ್ತು ಪರಿಹಾರ ವಸ್ತುಗಳನ್ನು ರವಾನಿಸಿದೆ.

ಅ. 7ರಂದು ಇಸ್ರೇಲ್​ ಮೇಲೆ ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರು ಗಾಜಾದಿಂದ 5 ಸಾವಿರ ರಾಕೆಟ್​ಗಳ ಮೂಲಕ ದಾಳಿ ಮಾಡಿ ಇಸ್ರೇಲ್​ನಲ್ಲಿ ಮಾರಣಹೋಮ ಸೃಷ್ಟಿಸಿದರು. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್​ ಹಮಾಸ್​ ಉಗ್ರರರ ವಿರುದ್ಧ ಸಮರ ಸಾರಿದ್ದು, ಗಾಜಾ ಒಳಗೆ ನುಗ್ಗಿ ಧ್ವಂಸ ಮಾಡುತ್ತಿದೆ.

ಯುದ್ಧದ ಪರಿಣಾಮ ಲಕ್ಷಾಂತರ ನಾಗರಿಕರು ನಿರ್ಗತಿಕರಾಗಿದ್ದು, ತನ್ನ ಮಿತ್ರ ಅಮೆರಿಕದ ಮನವಿ ಮೇರೆಗೆ ಅಲ್ಲಿನ ಜನರಿಗೆ ನೆರವು ಒದಗಿಸಲು ಇಸ್ರೇಲ್​ ಒಪ್ಪಿಕೊಂಡಿದೆ.

ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳಲ್ಲಿ ಜೀವ ಉಳಿಸುವ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಚೀಲಗಳು, ಟಾರ್ಪೌಲಿನ್‌ಗಳು, ನೈರ್ಮಲ್ಯ ಉಪಯುಕ್ತತೆಗಳು ಮತ್ತು ಇತರ ಅಗತ್ಯ ವಸ್ತುಗಳ ಜೊತೆಗೆ ನೀರು ಶುದ್ಧೀಕರಣ ಮಾತ್ರೆಗಳನ್ನು ಒಳಗೊಂಡಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್​ ಬಾಗ್ಚಿ ತಿಳಿಸಿದ್ದಾರೆ.

ಗಾಜಾವನ್ನು ಸಂಪೂರ್ಣ ವಶಕ್ಕೆ ಪಡೆದಿರುವುದಾಗಿ ಇಸ್ರೇಲ್​ ಘೋಷಣೆ ಮಾಡಿದ್ದು, ನೀರು, ವಿದ್ಯುತ್​, ಇಂಧನ ಮತ್ತು ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಿದ್ದು, ದೀರ್ಘಕಾಲ ಕೊರತೆಯನ್ನು ಸೃಷ್ಟಿಸುತ್ತಿದೆ.

ಇಸ್ರೇಲ್​​ ನಿಯಂತ್ರಣಕ್ಕೆ ಒಳಗಾಗದ ರಫಾ ಗಡಿ ಒಂದೇ ಗಾಜಾಗೆ ಇರುವ ಏಕೈಕ ಮಾರ್ಗವಾಗಿದೆ. ತಮ್ಮ ಮಿತ್ರ ದೇಶವಾಗಿರುವ ಯುನೈಟೆಡ್​ ಸ್ಟೇಟ್ಸ್​ ಮನವಿಯ ಮೇರೆಗೆ ಈಜಿಪ್ಟ್​ನಿಂದ ಗಾಜಾಗೆ ನೆರವು ಸಾಗಿಸಲು ಇಸ್ರೇಲ್​ ಅನುಮತಿಸಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳು ರಫಾ ಗಡಿಯ ಮೂಲಕ ಗಾಜಾಗೆ ತಲುಪಲಿದೆ.

ವಿಶ್ವಸಂಸ್ಥೆಯ ವಿವಿಧ ಏಜೆನ್ಸಿಗಳಿಂದ ಬಂದ ನೆರವನ್ನು ಗಾಜಾಗೆ ತಲುಪಿಸುವ ಜವಾಬ್ದಾರಿಯನ್ನು ಈಜಿಪ್ಟಿನ ರೆಡ್ ಕ್ರೆಸೆಂಟ್‌ ಕಚೇರಿಯು ಹೊತ್ತಿದೆ. ನಿನ್ನೆ ಇಪ್ಪತ್ತು ಟ್ರಕ್‌ಗಳು ಈಜಿಪ್ಟಿನ ಟರ್ಮಿನಲ್ ಅನ್ನು ಪ್ರವೇಶಿಸಿದ್ದವು. ಪ್ಯಾಲೆಸ್ತೀನ್​ ಕಡೆಯ 36 ಖಾಲಿ ಟ್ರೇಲರ್‌ಗಳು ಟರ್ಮಿನಲ್‌ಗೆ ಪ್ರವೇಶಿಸಿ ಈಜಿಪ್ಟಿನ ಕಡೆಗೆ ಹೋಗಿ, ನೆರವನ್ನು ಲೋಡ್ ಮಾಡಿಕೊಂಡು ರಫಾ ಗಡಿಯ ಮೂಲಕ ಗಾಜಾಗೆ ತೆರಳಿದವು.

ವಿಶ್ವಸಂಸ್ಥೆಯ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ರೂಜ ಶುಕ್ರವಾರ ಈಜಿಪ್ಟ್ ಕ್ರಾಸಿಂಗ್ ಬದಿಗೆ ಭೇಟಿ ನೀಡಿ ನೆರವು ವಿತರಣೆಯ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಿದರು. ಇವು ಕೇವಲ ಟ್ರಕ್​ಗಳಲ್ಲ, ಜೀವರಕ್ಷಕಗಳು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT