ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಕಾಂಗ್ರೆಸ್ ನಾಯಕ ಸುರೇಶ್ ಮಿಶ್ರಾ ಸೇರಿದಂತೆ 8 ಮಂದಿ ಬಿಜೆಪಿಗೆ ಸೇರ್ಪಡೆ

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿಯಿರುವಂತೆಯೇ  ಕಾಂಗ್ರೆಸ್ ನಾಯಕ  ಸುರೇಶ್ ಮಿಶ್ರಾ, ನಿವೃತ್ತ ಐಎಎಸ್ ಅಧಿಕಾರಿ ಅಂತರ್ ಸಿಂಗ್ ನೆಹ್ರಾ ಸೇರಿದಂತೆ 10 ಮಂದಿ ಸೋಮವಾರ ಬಿಜೆಪಿಗೆ ಸೇರ್ಪಡೆಯಾದರು. 

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿಯಿರುವಂತೆಯೇ  ಕಾಂಗ್ರೆಸ್ ನಾಯಕ  ಸುರೇಶ್ ಮಿಶ್ರಾ, ನಿವೃತ್ತ ಐಎಎಸ್ ಅಧಿಕಾರಿ ಅಂತರ್ ಸಿಂಗ್ ನೆಹ್ರಾ ಸೇರಿದಂತೆ 10 ಮಂದಿ ಸೋಮವಾರ ಬಿಜೆಪಿಗೆ ಸೇರ್ಪಡೆಯಾದರು. 

2008 ರ ವಿಧಾನಸಭಾ ಚುನಾವಣೆಯಲ್ಲಿ ಜೈಪುರದ ಸಂಗನೇರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಸುರೇಶ್ ಮಿಶ್ರಾ ರಾಜ್ಯಾಧ್ಯಕ್ಷ ಸಿಪಿ ಜೋಶಿ ಮತ್ತಿತರರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಅವರು 2008-ಚುನಾವಣೆಯಲ್ಲಿ ಬಿಜೆಪಿಯ ಘನಶ್ಯಾಮ್ ತಿವಾರಿ ವಿರುದ್ಧ 32,912 ಮತಗಳ ಅಂತರದಿಂದ ಸೋತಿದ್ದರು. ಇದೇ ವೇಳೆ ಜೈಪುರ ಜಿಲ್ಲಾಧಿಕಾರಿಯಾಗಿದ್ದ ನೆಹ್ರಾ ಕೂಡಾ ಕೇಸರಿ ಪಕ್ಷ ಸೇರಿದರು. 

ನಾಗೌರ್‌ನ ಹನುಮಾನ್ ಬೇನಿವಾಲ್ ಅವರ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಕೆಲವು ಸ್ಥಳೀಯ ನಾಯಕರು ಕೂಡಾ ಕೇಸರಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್