ಅಹ್ಮದಾಬಾದ್: ದೇಶದಲ್ಲಿ ಮತ್ತೊಂದು ಸೇತುವೆ ದುರಂತ ಸಂಭವಿಸಿದ್ದು, ಓರ್ವ ಆಟೋ ಚಾಲಕ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗುಜರಾತ್ ನ ಭನಸ್ಕಾಂತ ಜಿಲ್ಲೆಯ ಪಾಲನ್ಪುರ್ ನಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆಯೊಂದು ಕುಸಿದು ಬಿದ್ದು ಓರ್ವ ಆಟೋ ಚಾಲಕ ಮೃತಪಟ್ಟಿದ್ದಾರೆ. ಬ್ರಿಡ್ಜ್ ಕುಸಿತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಳಪೆ ಕಾಮಗಾರಿ ಸೇತುವೆ ಕುಸಿತಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.
ಪಲನ್ಪುರದಿಂದ ಅಂಬಾಜಿಗೆ ಸೇತುವೆ ಸಂಪರ್ಕ ಕಲ್ಪಿಸುತ್ತಿತ್ತು. ಕಳೆದ ಕೆಲ ತಿಂಗಳುಗಳಿಂದ ಸೇತುವೆ ನಿರ್ಮಾಣ ಹಂತದಲ್ಲಿತ್ತು. ಆದರೆ ಇಂದು ಈ ಸೇತುವೆ ಕುಸಿದಿದೆ. ಸೇತುವೆ ಅಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.