ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನ್ಯೂಸ್‌ಕ್ಲಿಕ್ ಪ್ರಕರಣ: ಪುರ್ಕಾಯಸ್ಥ, ಚಕ್ರವರ್ತಿಯನ್ನು 9 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್

ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ...

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರವೀರ್ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ
Lingaraj Badiger
Updated On : 25 Oct 2023, 3:15 pm

ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ 9 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ಆರೋಪಿಗಳ 15 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.

ಇದನ್ನು ಓದಿ: NewsClick ಪ್ರಕರಣ: ಪುರಕಾಯಸ್ಥ, ಚಕ್ರವರ್ತಿಗೆ ಮತ್ತೆ 5 ದಿನಗಳ ಕಾಲ ನ್ಯಾಯಾಂಗ ಬಂಧನ​

Advertisement

Advertisement

ಪೊಲೀಸರ ಮನವಿ ಪುರಸ್ಕರಿಸಿದ ದೆಹಲಿ ನ್ಯಾಯಾಲಯ, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ನವೆಂಬರ್ 2, 2023 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕ ಅಕ್ಟೋಬರ್ 3 ರಂದು ಬಂಧಿಸಿದ್ದು, ದೆಹಲಿಯಲ್ಲಿರುವ ನ್ಯೂಸ್‌ಕ್ಲಿಕ್ ಕಚೇರಿಯನ್ನು ಸೀಲ್ ಮಾಡಿದ್ದಾರೆ ಮತ್ತು  ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪತ್ರಕರ್ತರನ್ನು ವಿಚಾರಣೆಗೊಳಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement