ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿಂದ ಪ್ರಧಾನಿ ಮೋದಿಗೆ ಆಮಂತ್ರಣ 
ದೇಶ

ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಪ್ರಧಾನಿಗೆ ಆಮಂತ್ರಣ

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. 

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ.  ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಗೆ ಇಂದು ಆಮಂತ್ರಣ ನೀಡಿತು. 

ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವೀಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ  ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ.

ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ ಟ್ರಸ್ಟ್ ನ ಭಾಗವಾಗಿ ರಾಜ್ಯದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಭಾಗಿಯಾಗಿದ್ದರು.

ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಅ.25 ರಂದು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದರು 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ