ಸಾಂದರ್ಭಿಕ ಚಿತ್ರ 
ದೇಶ

ಉತ್ತರಾಖಂಡ್ ನ ಕಾಳಿ ನದಿಗೆ ಉರುಳಿ ಬಿದ್ದ ಟ್ಯಾಕ್ಸಿ: ಬೆಂಗಳೂರಿನ ಇಬ್ಬರು ಸೇರಿದಂತೆ 6 ಮಂದಿ ಯಾತ್ರಿಕರು ಸಾವು

ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಸಂಭವಿಸಿದ ದುರಂತದಲ್ಲಿ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಲಖನ್‌ಪುರ ಬಳಿ ಟ್ಯಾಕ್ಸಿಯೊಂದು ಕಾಳಿ ನದಿಗೆ ಬಿದ್ದು ಆರು ಮಂದಿ ದುರ್ಮರಣ ಹೊಂದಿದ್ದಾರೆ. 

ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಸಂಭವಿಸಿದ ದುರಂತದಲ್ಲಿ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಲಖನ್‌ಪುರ ಬಳಿ ಟ್ಯಾಕ್ಸಿಯೊಂದು ಕಾಳಿ ನದಿಗೆ ಬಿದ್ದು ಆರು ಮಂದಿ ದುರ್ಮರಣ ಹೊಂದಿದ್ದಾರೆ. 

ಯಾತ್ರಿಕರು ಆದಿ ಕೈಲಾಸದಿಂದ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದರು, ಕತ್ತಲೆ ಮತ್ತು ಸವಾಲಿನ ಭೂಪ್ರದೇಶದ ಕಾರಣ, ಶವಗಳ ಹೊರತೆಗೆಯುವಿಕೆ ಇನ್ನೂ ಪ್ರಾರಂಭವಾಗಿಲ್ಲ ಎಂದು ಪಿಥೋರಗಢ್‌ನ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ವರ್ ಸಿಂಗ್ ತಿಳಿಸಿದ್ದಾರೆ. ಬೆಳಗ್ಗೆಯಿಂದ ಶೋಧ ಮತ್ತು ಪತ್ತೆ ಕಾರ್ಯ ಆರಂಭವಾಗಲಿದೆ.

ಪಿಥೋರಗಢ್ ಪೊಲೀಸ್ ಅಧೀಕ್ಷಕ ಲೋಕೇಶ್ವರ್ ಸಿಂಗ್, ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಸಂತ್ರಸ್ತರು ಆದಿ ಕೈಲಾಸ ದರ್ಶನ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ, ಮೃತರಲ್ಲಿ ಇಬ್ಬರು ಬೆಂಗಳೂರು ಮೂಲದವರಾಗಿದ್ದಾರೆ. ತೆಲಂಗಾಣದ ಇಬ್ಬರು ಮತ್ತು ಉತ್ತರಾಖಂಡದ ಇಬ್ಬರು ಸೇರಿದಂತೆ ವಿವಿಧ ಸ್ಥಳಗಳಿಂದ ಬಂದವರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಭೀಕರ ಅಪಘಾತಕ್ಕೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್