ವೈಭವ್ ಗೆಹ್ಲೋಟ್ 
ದೇಶ

ಫೆಮಾ ಪ್ರಕರಣ: ರಾಜಸ್ಥಾನ ಸಿಎಂ ಗೆಹ್ಲೋಟ್ ಪುತ್ರನಿಗೆ ಇಡಿ ಸಮನ್ಸ್

ವಿದೇಶಿ ವಿನಿಮಯ ಕಾನೂನು(ಫೆಮಾ) ಉಲ್ಲಂಘಿಸಿದ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ...

ಜೈಪುರ: ವಿದೇಶಿ ವಿನಿಮಯ ಕಾನೂನು(ಫೆಮಾ) ಉಲ್ಲಂಘಿಸಿದ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಶುಕ್ರವಾರ ಜೈಪುರ ಅಥವಾ ನವದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ವೈಭವ್ ಗೆಹ್ಲೋಟ್ ಅವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನ ಮೂಲದ ಹಾಸ್ಪಿಟಾಲಿಟಿ ಗ್ರೂಪ್ ಟ್ರಿಟಾನ್ ಹೋಟೆಲ್ಸ್ & ರೆಸಾರ್ಟ್ಸ್ ಪ್ರೈವೇಟ್ ಲಿಮಿಟೆಡ್, ವರ್ಧಾ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕ ಹಾಗೂ ಪ್ರವರ್ತಕರಾದ ಶಿವಶಂಕರ್ ಶರ್ಮಾ, ರತ್ತನ್ ಕಾಂತ್ ಶರ್ಮಾ ಮತ್ತು ಇತರರ ವಿರುದ್ಧದ ಇತ್ತೀಚಿನ ಇಡಿ ದಾಳಿಗೆ ಸಂಬಂಧಿಸಿದಂತೆ ಸಮನ್ಸ್‌ ನೀಡಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ಜೈಪುರ, ಉದಯಪುರ, ಮುಂಬೈ ಮತ್ತು ದೆಹಲಿಯಲ್ಲಿ ದಾಳೆ ನಡೆಸಿದ್ದ ಇಡಿ ಅಧಿಕಾರಿಗಳು ಮೂರು ದಿನಗಳ ತೀವ್ರ ಶೋಧ ನಡೆಸಿದ್ದರು.

ರತ್ತನ್ ಕಾಂತ್ ಶರ್ಮಾ ಅವರು ವೈಭವ್ ಗೆಹ್ಲೋಟ್ ಅವರೊಂದಿಗಿನ ಸಂಪರ್ಕವನ್ನು ಇಡಿ ಪರಿಶೀಲಿಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ(ಫೆಮಾ) ಅಡಿಯಲ್ಲಿ ಅವರ ಹೇಳಿಕೆ ದಾಖಲಿಸಲು ವಿಚಾರಣೆಗೆ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!