ಸಾಂದರ್ಭಿಕ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, 5 ಉಗ್ರರ ಸೆದೆಬಡಿದ ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, 5 ಉಗ್ರರ ಹೆಡೆಮುರಿ ಕಟ್ಟಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, 5 ಉಗ್ರರ ಹೆಡೆಮುರಿ ಕಟ್ಟಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಮಾತ್ರವಲ್ಲದೇ ಈ ಕಾರ್ಯಾಚರಣೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸಿದ ಐದು ಮಂದಿ ಅಪರಿಚಿತ ಭಯೋತ್ಪಾದಕರನ್ನು ಹತ ಮಾಡಿದೆ.

ಈ ಬಗ್ಗೆ ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇದುವರೆಗೆ ಐವರು ಉಗ್ಗರು ಸಾವನ್ನಪ್ಪಿದ್ದಾರೆ. ಈ ಪೈಕಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದೆ ಮೂರು ಮಂದಿ ಸೇರಿ ಒಟ್ಟು 5 ಮಂದಿ ಉಗ್ರರನ್ನು ಹತ ಮಾಡಲಾಗಿದೆ ಎಂದರು.

ಅಂತೆಯೇ ಉಗ್ರರ ಗುರುತು ಪತ್ತೆ ಕಾರ್ಯ ಮಾಡಲಾಗುತ್ತಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ