ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಮಚಿಲ್ ಸೆಕ್ಟರ್‌ನ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇದುವರೆಗೆ ಒಳನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ" ಎಂದು ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹತ್ಯೆಯಾದ ಉಗ್ರರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿ ಕುಳಿತಿರುವ ಶಂಕೆಗಳಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.