ದೇಶ

ಆಂಧ್ರ ರೈಲು ಅಪಘಾತ: ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು ರೈಲ್ವೆ ಸಚಿವರೊಂದಿಗೆ ಮಾತನಾಡಿದ ಪ್ರಧಾನಿ

Srinivas Rao BV

ನವದೆಹಲಿ: ಆಂಧ್ರಪ್ರದೇಶದ ವಿಜಯಪುರಂ ನಲ್ಲಿ ನಡೆದಿರುವ ರೈಲು ಅಪಘಾತದ ಬಗ್ಗೆ ಪ್ರಧಾನಿ ಮೋದಿ ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.
 
ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
 
ಘಟನೆಯಲ್ಲಿ ಇತ್ತೀಚಿನ ಮಾಹಿತಿಯ ಪ್ರಕಾರ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದು 32 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಎರಡು ರೈಲುಗಳ ನಡುವೆ ಈ ಅಪಘಾತ ಸಂಭವಿಸಿ ಮೂರು ಬೋಗಿಗಳು ಹಳಿ ತಪ್ಪಿದ್ದವು. 

ಅಲಮಂದ, ಕಂತಕಪಲ್ಲಿ ಸೆಕ್ಷನ್ ನಡುವೆ ರೈಲು ಅಪಘಾತದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ಮೋದಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಮಾತನಾಡಿದರು ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿ ತಿಳಿಸಿದೆ. 

ಸಂತ್ರಸ್ತರಿಗೆ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ "ಪ್ರಧಾನಿಯವರು ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾರೆ ಮತ್ತು ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಾರೆ" ಎಂದು ಪಿಎಂಒ ಟ್ವೀಟ್ ಮಾಡಿದೆ.

SCROLL FOR NEXT