ವಿಜಯನಗರಂ ನಲ್ಲಿ ರೈಲು ಅಪಘಾತ 
ದೇಶ

ಆಂಧ್ರಪ್ರದೇಶದ ವಿಜಯನಗರಂ ನಲ್ಲಿ ರೈಲು ಅಪಘಾತ, 8 ಸಾವು, 32ಕ್ಕೂ ಹೆಚ್ಚು ಮಂದಿಗೆ ಗಾಯ 

ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದೆ. 

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು 32 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.
 
ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು  ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ. 

ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಹಾಗೂ ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆ. ಘಟನಾ ಸ್ಥಳದಲ್ಲಿ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ.

ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದ್ದು 83003; 83004; 83005; 83006, 08912746330, 8106053051, 8106053052, 8500041670, 8500041671 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!