ಘಟನಾ ಸ್ಥಳದ ಹೊರಗೆ ಜಮಾಯಿಸಿರುವ ಜನರು. 
ದೇಶ

ಕೇರಳ ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಫೋಟ: ಅತ್ಯಂತ ದುರಾದೃಷ್ಟಕರ ಘಟನೆ ಎಂದ ಪಿಣರಾಯಿ ವಿಜಯನ್, ಸ್ಥಳಕ್ಕೆ ಎನ್ಐಎ, ಎನ್ಎಸ್'ಜಿ ಕಮಾಂಡೋಗಳು ದೌಡು

ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಿರುವನಂತಪುರಂ: ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಫೋಟ ಸಂಭವಿಸಿದಾಗ 2,000ಕ್ಕೂ ಹೆಚ್ಚು ಜನರು ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡಿರುವ 36 ಮಂದಿಯ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದು, ಪ್ರಾರ್ಥನಾ ಸಭೆಯಲ್ಲಿ ಸ್ಫೋಟ ಸಂಭವಿಸಿದ ನಂತರ ರಾಜ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸುವಂತೆ ಗೃಹ ಸಚಿವರು, ಎನ್ಐಎ ಮತ್ತು ಎನ್ಎಸ್​ಜಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಘಟನೆ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ವ್ಯಕ್ತಪಡಿಸಿದ್ದು, "ಇದು ಅತ್ಯಂತ ದುರಾದೃಷ್ಟಕರ ಘಟನೆ" ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಾವು ವಿವರ ಸಂಗ್ರಹಿಸುತ್ತಿದ್ದೇವೆ. ಎರ್ನಾಕುಲಂನ ಎಲ್ಲಾ ಉನ್ನತ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದಾರೆ. ಡಿಜಿಪಿ ಸ್ಥಳಕ್ಕೆ ತೆರಳುತ್ತಿದ್ದಾರೆ. ನಾವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಡಿಜಿಪಿಯೊಂದಿಗೆ ಮಾತನಾಡಿದ್ದೇನೆ. ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಕುರಿತು ಸಂಪೂರ್ಣವಾಗಿ ವಿವರಗಳನ್ನು ಪಡೆದ ನಂತರ ಮಾತನಾಡುತ್ತೇನೆ" ಎಂದು ಹೇಳಿದ್ದಾರೆ.

ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪ್ರತಿಕ್ರಿಯೆ ನೀಡಿ, ರಜೆಯಲ್ಲಿರುವ ಆರೋಗ್ಯ ಸಿಬ್ಬಂದಿ ಸ್ಫೋಟದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ತಕ್ಷಣ ಹಿಂತಿರುಗುವಂತೆ ಎಲ್ಲಾ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿದ್ದಾರೆ.

ಘಟನೆ ಸಂಬಂಧ ದೆಹಲಿಯಲ್ಲಿರುವ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ ವಿ ಗೋವಿಂದನ್ ಅವರು ಪ್ರತಿಕ್ರಿಯೆ ನೀಡಿ, ಪ್ಯಾಲೆಸ್ತೀನ್ ಸಮಸ್ಯೆಯಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಗಳು ನಡೆದಿದ್ದೇ ಆದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಎಲ್ಲಾ ಪ್ರಜಾಸತ್ತಾತ್ಮಕ ವ್ಯಕ್ತಿಗಳು ಒಗ್ಗಟ್ಟನಿಂದ ಈ ಘಟನೆಯನ್ನು ಖಂಡಿಸುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಸ್ಫೋಟ ಆಕಸ್ಮಿಕವಲ್ಲ ಎಂದು ಹೇಳಿದ ಅವರು, ಸ್ಥಳದಲ್ಲಿ ಬಾಂಬ್'ಗೆ ಸಂಬಂಧಿಸಿದ ಕೆಲವು ಭಾಗಗಳು ಕಂಡು ಬಂದಿದೆ. ಹೀಗಾಗಿ ಇದು ಆಕಸ್ಮಿಕ ಸ್ಫೋಟವಾಗಿರಲು ಸಾಧ್ಯವಿಲ್ಲ ಎಂದಿದ್ದಾರೆ.

ಕೇರಳ ಪೊಲೀಸ್ ಆಯುಕ್ತ ಶೇಖ್ ದರ್ವೇಶ್ ಸಾಹಿಬ್ ಅವರು ಮಾತನಾಡಿ, ಪ್ರಾಥಮಿಕ ತನಿಖೆಯಲ್ಲಿ ಐಇಡಿ ಸ್ಫೋಟಿಸಿರುವುದಾಗಿ ತಿಳಿದುಬಂದಿದೆ. ದಾಳಿಯ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕದಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಸ್ಥಳಕ್ಕೆ ಎನ್ಎಸ್'ಜಿ ಕಮಾಂಡೋಗಳ ದೌಡು
ಘಟನೆ ಸಂಬಂಧ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ದೆಹಲಿಯಿಂದ ಕೇರಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ಆರಂಭಿಸಿದೆ.

ಓರ್ವ ಅಧಿಕಾರಿ ಸೇರಿದಂತೆ ಎಂಟು ಸದಸ್ಯರ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ತಂಡವು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಎನ್‌ಎಸ್‌ಜಿ ಮುಖ್ಯಸ್ಥ ಎಂಎ ಗಣಪತಿ ಅವರ ಸೂಚನೆಯಂತೆ ಸ್ನಿಫರ್ ಶ್ವಾನಗಳು ಹಾಗೂ ಸ್ಫೋಟಕ ವಸ್ತುಗಳ ಜ್ಞಾನ ಹೊಂದಿರುವ ತಜ್ಞರನ್ನು ಒಳಗೊಂಡ ಬಾಂಬ್ ನಿಷ್ಕ್ರಿಯ ಘಟಕವನ್ನು ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೇರಳ ರಾಜ್ಯದ ಕೊಚ್ಚಿಯಿಂದ 10 ಕಿ. ಮೀ. ದೂರದಲ್ಲಿ ಇರುವ ಕಲಮಸ್ಸೆರಿ ಎಂಬಲ್ಲಿ ಇರುವ ಜೆಹೋವಾಸ್ ವಿಟ್ನೆಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ಇಂದು ಬೆಳಿಗ್ಗೆ 9.45ರ ಸುಮಾರಿಗೆ ಸರಣಿ ಸ್ಫೋಟ ಸಂಭವಿಸಿತ್ತು. ಈ ಸಮುದಾಯ ಭವನ  ಕ್ರೈಸ್ತರ ಒಂದು ಪಂಗಡದ ಪ್ರಾರ್ಥನಾ ಮಂದಿರವಾಗಿದೆ. ಇಲ್ಲಿ ಭಾನುವಾರದ ಪ್ರಾರ್ಥನೆ ನಡೆಯುತ್ತಿತ್ತು. ಪ್ರಾರ್ಥನೆಯ ಮಧ್ಯದಲ್ಲೇ ಸ್ಫೋಟ ನಡೆದಿದೆ. ಘಟನೆ ವೇಳೆ ಸುಮಾರು 2 ಸಾವಿರ ಮಂದಿ ಪ್ರಾರ್ಥನಾ ಮಂದಿರದಲ್ಲಿದ್ದರು ಎನ್ನಲಾಗಿದೆ.

ಸ್ಫೋಟ ಸಂಭವಿಸಿದ ಕೂಡಲೇ ಪ್ರಾರ್ಥನೆ ನಡೆಸುತ್ತಿದ್ದವರು ಪ್ರಾರ್ಥನಾ ಮಂದಿರದಿಂದ ಹೊರಗೆ ಓಡಿ ಬಂದಿದ್ದಾರೆ. ಘಟನೆ ವೇಳೆ ಪ್ರಾರ್ಥನಾ ಮಂದಿರದ ಒಳಗೆ ಭಾರೀ ಹೊಗೆ ಕಾಣಿಸಿಕೊಂಡಿದೆ. ಸ್ಫೋಟದ ಪರಿಣಾಮ ಓರ್ವ ಮಹಿಳೆ ಗಾಯಗೊಂಡು ಮೃತಪಟ್ಟಿದ್ದರೆ, 36 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT