ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಕೊಚ್ಚಿ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ; ಸರ್ವಪಕ್ಷ ಸಭೆ ಕರೆದ ಕೇರಳ ಸಿಎಂ ಪಿಣರಾಯಿ ವಿಜಯನ್

ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಇಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ.

ತಿರುವನಂತಪುರಂ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಇಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ.

ಇಂದು ಬೆಳಿಗ್ಗೆ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದು, 36ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ 10 ಗಂಟೆಗೆ ಸಚಿವಾಲಯದ ಕಾಂಪ್ಲೆಕ್ಸ್‌ನಲ್ಲಿರುವ ಮುಖ್ಯಮಂತ್ರಿಗಳ ಕಾನ್ಫರೆನ್ಸ್ ಸಭಾಂಗಣದಲ್ಲಿ ಸರ್ವಪಕ್ಷ ಸಭೆಗೆ ಪಿಣರಾಯಿ ವಿಜಯನ್ ಕರೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಹೇಳಿಕೆ ತಿಳಿಸಿದೆ.

ಕೊಚ್ಚಿಯ ಸಮಾವೇಶ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT