ಪ್ರಾತಿನಿಧಿಕ ಚಿತ್ರ 
ದೇಶ

ಥಾಣೆ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪ, ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡ ತಂದೆ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 11 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಾದ ಕೆಲವೇ ಗಂಟೆಗಳ ನಂತರ ಉಪನಗರ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 11 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಾದ ಕೆಲವೇ ಗಂಟೆಗಳ ನಂತರ ಉಪನಗರ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಅಕ್ಟೋಬರ್ 26 ರಂದು ತನ್ನ ವಿರುದ್ಧ ಪ್ರಕರಣ ದಾಖಲಿಸಿದ ನಂತರ 40 ವರ್ಷದ ಆರೋಪಿ ಪರಾರಿಯಾಗಿದ್ದಾನೆ ಮತ್ತು ಅದೇ ದಿನ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಆಟೋರಿಕ್ಷಾ ಚಾಲಕನಾಗಿದ್ದು, ತನ್ನ ಮಗಳೊಂದಿಗೆ ಬದ್ಲಾಪುರದಲ್ಲಿ ವಾಸವಾಗಿದ್ದರು. ಅವರ ಪತ್ನಿ ದುಬೈನಲ್ಲಿ ಉದ್ಯೋಗದಲ್ಲಿದ್ದು, ಕಳೆದ ಎರಡು ವರ್ಷಗಳಿಂದ ಅಲ್ಲಿದ್ದಾರೆ ಎಂದು ಹಿರಿಯ ಇನ್ಸ್‌ಪೆಕ್ಟರ್ ಅರುಣ್ ಕ್ಷೀರಸಾಗರ್ ತಿಳಿಸಿದ್ದಾರೆ.

ಆರೋಪಿಯು ಜುಲೈ 2022 ರಿಂದ ಈ ವರ್ಷದ ಅಕ್ಟೋಬರ್ ನಡುವೆ ತನ್ನ ಮಗಳ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಈ ಕಿರುಕುಳದ ಬಗ್ಗೆ ಬಾಲಕಿ ಇತ್ತೀಚೆಗೆ ತನ್ನ ಅಜ್ಜಿಗೆ ತಿಳಿಸಿದ್ದಾಳೆ ಮತ್ತು ಕೆಲವು ದಿನಗಳ ಹಿಂದೆ ಮನೆಗೆ ಬಂದ ತಾಯಿಗೂ ವಿಷಯ ತಿಳಿಸಲಾಗಿದೆ ಎಂದು ಅವರು ಹೇಳಿದರು.

ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದೂರು ದಾಖಲಿಸಿದ ನಂತರ ಮನೆಗೆ ಓಡಿಹೋದ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದರು. ಅದೇ ದಿನ ಆರೋಪಿ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅವರು ಹೇಳಿದರು.

ರೈಲ್ವೇ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT