ಛತ್ತೀಸ್ ಗಢ ಸಿಎಂ ಬಘೇಲ್ 
ದೇಶ

ನೋಟಾ ಆಯ್ಕೆ ರದ್ದುಗೊಳಿಸಬೇಕು: ಛತ್ತೀಸ್‌ಗಢ ಸಿಎಂ ಬಘೇಲ್

ಯಾವುದೇ ಅಭ್ಯರ್ಥಿಗೆ ಮತ ಚಲಾಯಿಸಲು ಒಲವು ತೋರದ ನಾಗರಿಕರಿಗೆ ವಿದ್ಯುನ್ಮಾನ ಮತಯಂತ್ರಗಳಲ್ಲಿನ ನೋಟಾ ಆಯ್ಕೆಯನ್ನು ರದ್ದುಗೊಳಿಸಬೇಕು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್  ಹೇಳಿದ್ದಾರೆ.

ರಾಯಪುರ: ಯಾವುದೇ ಅಭ್ಯರ್ಥಿಗೆ ಮತ ಚಲಾಯಿಸಲು ಒಲವು ತೋರದ ನಾಗರಿಕರಿಗೆ ವಿದ್ಯುನ್ಮಾನ ಮತಯಂತ್ರಗಳಲ್ಲಿನ ನೋಟಾ ಆಯ್ಕೆಯನ್ನು ರದ್ದುಗೊಳಿಸಬೇಕು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್  ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ನಂತರ 2013 ರಲ್ಲಿ ಚುನಾವಣಾ ಆಯೋಗ ಇವಿಎಂನ ಕೊನೆಯಲ್ಲಿ ನೋಟಾ ಬಟನ್ ಸೇರಿಸಿತು. ನೋಟಾ ತನ್ನದೇ ಆದ ಚಿಹ್ನೆಯ ಮೇಲೆ ಕಪ್ಪು ಶಿಲುಬೆಯೊಂದಿಗೆ ಬ್ಯಾಲೆಟ್ ಪೇಪರ್ ಹೊಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಘೇಲ್, ಕೆಲವೊಮ್ಮೆ ನೋಟಾ ಗೆಲುವು ಮತ್ತು ಸೋಲಿನ ಅಂತರಕ್ಕಿಂತ ಹೆಚ್ಚಿನ ಮತಗಳನ್ನು ಪಡೆದಿರುವುದು ಕಂಡುಬಂದಿದೆ ಎಂದರು. 
        
2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಮತದಾರರು ನೋಟಾ ಒಲವು ತೋರಿದ್ದು, ಆಯ್ಕೆಯು ಚುನಾವಣೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಚುನಾವಣಾ ಆಯೋಗ ಅದನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಇಬ್ಬರು ಅಭ್ಯರ್ಥಿಗಳ ನಡುವೆ ಗೆಲುವು ಮತ್ತು ಸೋಲಿನ ಅಂತರಕ್ಕಿಂತ ನೋಟದಲ್ಲಿ ಹೆಚ್ಚಿನ ಮತ ನೀಡಿರುವುದು ಹಲವು ಬಾರಿ ಕಂಡುಬಂದಿದೆ. ಆದ್ದರಿಂದ ನೋಟಾ ಆಯ್ಕೆಯನ್ನು ರದ್ದುಗೊಳಿಸಬೇಕು  ಎಂದು ಬಘೆಲ್ ಹೇಳಿದರು. 
        
90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT