ದೇಶ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ರಾಹುಲ್ ಗಾಂಧಿ

Lingaraj Badiger

ಕವರ್ಧಾ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರ ಉಳಿಸಿಕೊಂಡರೆ ಛತ್ತೀಸ್‌ಗಢದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆ ಯೋಜನೆಯಡಿ ಬಡವರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಭರವಸೆ ನೀಡಿದ್ದಾರೆ.

ರಾಜ್‌ನಂದಗಾಂವ್ ಮತ್ತು ಕವರ್ಧಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೃಷಿ ಭೂಮಿ ರಹಿತ ಕಾರ್ಮಿಕರಿಗೆ(ಗ್ರಾಮೀಣ ಪ್ರದೇಶಗಳಲ್ಲಿ) ಈಗಿರುವ ವರ್ಷಕ್ಕೆ 7,000 ರೂಪಾಯಿ ಬದಲಿಗೆ 10,000 ರೂಪಾಯಿ ನೀಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ, "ಅದಾನಿಗೆ ಅವರು ನೀಡುವ ಹಣವನ್ನು ನಾವು ಛತ್ತೀಸ್‌ಗಢದ ಕಾರ್ಮಿಕರು, ರೈತರು ಮತ್ತು ಸಣ್ಣ ವ್ಯಾಪಾರಿಗಳಿಗೆ ನೀಡುತ್ತೇವೆ" ಎಂದರು.

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜಾತಿಗಣತಿ ನಡೆಸುವುದಾಗಿ ರಾಹುಲ್ ಗಾಂಧಿ ಪುನರುಚ್ಚರಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ರೈತರು ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸಹಾಯ ಮಾಡಲು ಛತ್ತೀಸ್‌ಗಢದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದರು.

ನಮ್ಮ ಖಾತರಿ: ಡಾ ಖುಬ್‌ಚಂದ್ ಬಾಘೇಲ್ ಆರೋಗ್ಯ ನೆರವು ಯೋಜನೆಯಡಿ, ಪ್ರಸ್ತುತ ಬಡವರಿಗೆ ನೀಡಲಾಗುತ್ತಿರುವ 5 ಲಕ್ಷ ರೂಪಾಯಿಗಳ ಬದಲಿಗೆ 10 ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಇತರರು ಸಹ ಈಗಿರುವ 50,000 ರೂಪಾಯಿಗಳ ಬದಲಿಗೆ 5 ಲಕ್ಷದವರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಾರೆ" ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಹುಲ್ ಗಾಂಧಿ ಭಾಷಣದ ನಂತರ ಟ್ವೀಟ್ ಮಾಡಿದ್ದಾರೆ.

SCROLL FOR NEXT