ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ತಮ್ಮ ಶಿಕ್ಷಕನ ಮೇಲೆಯೇ ಗುಂಡಿನ ದಾಳಿ ನಡೆಸಿದ ಅಪ್ರಾಪ್ತ ಸಹೋದರರ ಬಂಧನ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಹಪಾಠಿಗಳ ಸಮ್ಮುಖದಲ್ಲೇ ಶಾಲೆಯ ಹೊರಗೆ ತಮ್ಮ ಶಿಕ್ಷಕನ ಮೇಲೆಯೇ ಗುಂಡು ಹಾರಿಸಿದ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಸೋದರಸಂಬಂಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಹಪಾಠಿಗಳ ಸಮ್ಮುಖದಲ್ಲೇ ಶಾಲೆಯ ಹೊರಗೆ ತಮ್ಮ ಶಿಕ್ಷಕನ ಮೇಲೆಯೇ ಗುಂಡು ಹಾರಿಸಿದ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಸೋದರಸಂಬಂಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಕಮಿಷನರ್ ರಾಮಕೃಷ್ಣ ಸ್ವರ್ಣಕರ್ ಅವರು ಮಾತನಾಡಿ, ಚೌಬೆಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕ ಗುರುವಾರ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಗದರಿಸಿದ್ದರು ಮತ್ತು ಹೊಡೆದಿದ್ದರು. ಇದರಿಂದ ತೀವ್ರ ಮುಜುಗರಕ್ಕೊಳಗಾಗಿದ್ದ ವಿದ್ಯಾರ್ಥಿಯೊಬ್ಬ ತನ್ನ ಸೋದರಸಂಬಂಧಿಯೊಂದಿಗೆ ಸೇರಿ ರಸಾಯನಶಾಸ್ತ್ರದ ಶಿಕ್ಷಕ ವಿಕಾಸ್ ತಿವಾರಿ ಮೇಲೆ ಹಲ್ಲೆ ನಡೆಸಲು ಪ್ಲಾನ್ ಮಾಡಿದ್ದರು” ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಾರ, 15 ಮತ್ತು 16 ವರ್ಷದ ಇಬ್ಬರು ಸೋದರಸಂಬಂಧಿಗಳು ಕಂಟ್ರಿಮೇಡ್ ಪಿಸ್ತೂಲ್ ನೊಂದಿಗೆ ಶುಕ್ರವಾರ ಬೆಳಗ್ಗೆ 7.30 ರ ಸುಮಾರಿಗೆ ಶಾಲೆಗೆ ಆಗಮಿಸಿ, ಶಿಕ್ಷಕ ತಿವಾರಿ ಬರುವವರೆಗೆ ಕಾಯುತ್ತಿದ್ದರು.

"ತಿವಾರಿ ಅವರು ಶಾಲೆಗೆ ಬಂದಾಗ, ಇಬ್ಬರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ತಿವಾರಿ ಅವರಿಗೆ ಕೆಲವು ಗಾಯಗಳಾಗಿವೆ. ಅದೃಷ್ಟವಶಾತ್ಪ್ರಾಣಾಪಾಯಿಂದ ಪಾರಾಗಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರೂ ಅಪ್ರಾಪ್ತರನ್ನು ಮತ್ತು ಅವರ ಇಬ್ಬರು ಸಂಬಂಧಿಕರಾದ ವಿವೇಕ್ ಮತ್ತು ಇಂದ್ರೇಶ್ ಯಾದವ್ ಅವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ