ರೈಲು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕ ವಿಳಂಬಗೊಂಡ ರೈಲುಗಳನ್ನು ತೋರಿಸುತ್ತಿದ್ದ ರೈಲುಗಳ ವೇಳಾಪಟ್ಟಿಯ ಸ್ಕ್ರೀನ್ ನೋಡುತ್ತಿದ್ದ ದೃಶ್ಯ. 
ದೇಶ

ಆಂಧ್ರ ಪ್ರದೇಶ ರೈಲು ದುರಂತ: ಹಳಿಗಳಿಗೆ ಹಾನಿ, 33 ರೈಲುಗಳು ರದ್ದು!

ಆಂಧ್ರಪ್ರದೇಶ ರೈಲು ದುರಂತ ಘಟನೆ ಬಳಿಕ ಹಳಿಗಳು ಹಾನಿಗೊಳಗಾಗಿದ್ದು, ಪರಿಣಾಮ 33 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

ಅಮರಾವತಿ: ಆಂಧ್ರಪ್ರದೇಶ ರೈಲು ದುರಂತ ಘಟನೆ ಬಳಿಕ ಹಳಿಗಳು ಹಾನಿಗೊಳಗಾಗಿದ್ದು, ಪರಿಣಾಮ 33 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

ಆಂಧ್ರ ಪ್ರದೇಶದ ವಿಜಯನಗರದಲ್ಲಿ (Vijayanagara) ಎರಡು ಪ್ಯಾಸೆಂಜರ್ ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದ ನಂತರ 30 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 11 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ, 24 ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪೈಕಿ 3 ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಎರಡು ರೈಲುಗಳ ವೇಳಾಪಟ್ಟಿಯನ್ನು ಇಂದು ಬೆಳಿಗ್ಗೆ ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.

ಚೆನ್ನೈ ಸೆಂಟ್ರಲ್‌-ಪುರಿ (22860), ರಾಯಗಡ- ಗುಂಟೂರು (17244), ವಿಶಾಖಪಟ್ಟಣ-ಗುಂಟೂರು (17240)ರೈಲು ರದ್ದಾಗಿದ್ದು, ಚೆನ್ನೈ ಸೆಂಟ್ರಲ್‌-ಶಾಲಿಮಾರ್ (12842), ಅಲೆಪ್ಪಿ-ಧನ್‌ಬಾದ್‌ಗೆ (13352)ರೈಲುಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಭಾನುವಾರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣಂ-ರಗಡ ಪ್ಯಾಸೆಂಜರ್ ರೈಲು ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 3 ಬೋಗಿಗಳು ಜಖಂಗೊಂಡಿವೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT