ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 
ದೇಶ

ರೈಲುಗಳಿಗೆ ಚಾಲನೆ ನೀಡುವುದರಲ್ಲಿರುವ ಉತ್ಸಾಹ ಸುರಕ್ಷತೆ ನೀಡುವುದರಲ್ಲೂ ತೋರಿಸಿ: ಕೇಂದ್ರ ಸರ್ಕಾರಕ್ಕೆ ಮಲ್ಲಿಕಾರ್ಜುನ ಖರ್ಗೆ

ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೋಮವಾರ ವಾಗ್ದಾಳಿ ನಡೆಸಿದ್ದಾರೆ. 

ನವದೆಹಲಿ: ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿತಪ್ಪಿ ಸಂಭವಿಸಿರುವ ದುರಂತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ, ದುರ್ಘಟನೆಯಲ್ಲಿ ಹಲವರು ಜೀವ ಕಳೆದುಕೊಂಡಿದ್ದು, ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಬಾಲಸೋರ್ ರೈಲು ದುರಂತ ಘಟನೆ ಬಳಿಕವೂ ಕೇಂದ್ರ ಸರ್ಕಾರ ಸುರಕ್ಷತೆಯನ್ನು ಗಾಳಿಗೆ ತೂರಿದಂತಿದೆ. ಕೇಂದ್ರ ಸರ್ಕಾರ ಅಬ್ಬರ ಮತ್ತು ಪ್ರಚಾರಗಳೊಂದಿಗೆ ರೈಲುಗಳಿಗೆ ಚಾಲನೆ ನೀಡುವುದರಲ್ಲಿ ತೋರುವ ಉತ್ಸಾಹವನ್ನು ಸುರಕ್ಷತೆ ಒದಗಿಸುವುದರತ್ತಲೂ ತೋರಬೇಕು ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್