ಎನ್‌ಸಿಪಿ ಶಾಸಕನ ಮನೆಗೆ ಬೆಂಕಿ 
ದೇಶ

ಮರಾಠ ಮೀಸಲಾತಿ ಹೋರಾಟ: ಎನ್‌ಸಿಪಿ ಶಾಸಕನ ಮನೆಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರದಲ್ಲಿ ಮರಾಠಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಶಾಸಕ ಪ್ರಕಾಶ್ ಸೋಲಂಕೆ ಅವರಿಗೆ ಸೇರಿದ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಮರಾಠಿ ಮೀಸಲಾತಿ ಹೋರಾಟ (Maratha reservation protest) ತಾರಕಕ್ಕೇರಿದ್ದು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(NCP) ಶಾಸಕ ಪ್ರಕಾಶ್ ಸೋಲಂಕೆ ಅವರಿಗೆ ಸೇರಿದ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು (Maharashtra Police) ತಿಳಿಸಿದ್ದಾರೆ.

ಹೌದು.. ಮರಾಠಿ ಮೀಸಲಾತಿಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಮರಾಠ ಮೀಸಲಾತಿ ಹೋರಾಟ ಮತ್ತು ಹೋರಾಟಗಾರ ಮನೋಜ್ ಜರಂಗೆ ಅವರ ಉಪವಾಸ ಸತ್ಯಾಗ್ರಹ (hunger strike)ದ ಕುರಿತಂತೆ ಸೋಲಂಕೆ ನೀಡಿದ್ದಾರೆಂಬ ಅವಹೇಳನಕಾರಿ ಹೇಳಿಕೆ ಕುರಿತಾದ ಆಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಆ ಬಳಿಕ ಪ್ರತಿಭಟನೆ ಭುಗಿಲೆದ್ದಿದೆ. ಮಜಲ್‌ಗಾಂವ್‌ನ ಸೋಲಂಕೆ ನಿವಾಸದ ಬಳಿ ನಿಂತಿದ್ದ ಕಾರಿಗೂ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಶಾಸಕರು ಮನೆಯಲ್ಲಿದ್ದರೇ ಎಂಬುದು ಸ್ಪಷ್ಟವಾಗಿಲ್ಲ. ಪ್ರಕಾಶ್ ಸೋಲಂಕೆ ಅವರದ್ದೆನ್ನಲಾದ ಆಡಿಯೊ ಹರಿದಾಡುತ್ತಿದ್ದಂತೆ ಪ್ರತಿಭಟನೆ ಭುಗಿಲೆದ್ದಿದೆ. ಸ್ಥಳೀಯವಾಗಿ ಬಂದ್‌ಗೆ ಕರೆ ನೀಡಲಾಗಿದೆ. ಶಾಸಕರ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮರಾಠ ಮೀಸಲಾತಿ ವಿಚಾರವು ಮಕ್ಕಳಾಟದಂತಾಗಿದೆ ಎಂದು ಶಾಸಕರು ಹೇಳಿದ್ದಾರೆ ಎನ್ನಲಾದ ಆಡಿಯೊ ಹರಿದಾಡುತ್ತಿದೆ. ಅಲ್ಲದೆ, ಮನೋಜ್ ಜರಂಗೆ ಅವರನ್ನು ಉದ್ದೇಶಿಸಿ, ಗ್ರಾಮ ಪಂಚಾಯಿತಿಯಲ್ಲೂ ಸ್ಪರ್ಧೆ ಮಾಡದವನು ಈಗ ಬುದ್ಧಿವಂತ ಮನುಷ್ಯನಾಗಿದ್ದಾನೆ ಎಂದೂ ಶಾಸಕರು ಹೇಳಿದ್ದಾರೆ ಎನ್ನಲಾಗಿದೆ. ಇತರೆ ಹಿಂದುಳಿದ ವರ್ಗ (ಒಬಿಸಿ)ಗಳ(OBC) ಅಡಿಯಲ್ಲಿ ಮರಾಠರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಒತ್ತಾಯಿಸಿ ಮರಾಠ ಸಮುದಾಯ (Maratha Community)ವು ಪ್ರತಿಭಟನೆ ನಡೆಸುತ್ತಿದೆ.

ಅಕ್ಟೋಬರ್ 25ರಿಂದ ಎರಡನೇ ಹಂತದ ಪ್ರತಿಭಟನೆಯ ಭಾಗವಾಗಿ ಜಲ್ನಾ ಜಿಲ್ಲೆಯ ಅಂತರ್ವಾಲಿ ಸಾರಥಿ ಹಳ್ಳಿಯಲ್ಲಿ ಜರಂಗೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಬಳಿಕ ಪ್ರತಿಭಟನೆ ತೀವ್ರತೆ ಪಡೆಯಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT