ಸಂಗ್ರಹ ಚಿತ್ರ 
ದೇಶ

ಹಾವು ಓಡಿಸಲು ಹಾಕಿದ ಹೊಗೆಯಿಂದ ಮನೆಗೆ ಹೊತ್ತಿಕೊಂಡ ಬೆಂಕಿ: ಕುಟುಂಬ ಕಂಗಾಲು

ಮನೆಗೆ ನುಗ್ಗಿದ ಹಾವು ಓಡಿಸಲು ಹೊಗೆ ಹಾಕಲು ಹೋದ ಕುಟುಂಬವೊಂದು ಮನೆಯನ್ನೇ ಸುಟ್ಟುಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಬಂದಾ (ಉತ್ತರ ಪ್ರದೇಶ):  ಮನೆಗೆ ನುಗ್ಗಿದ ಹಾವು ಓಡಿಸಲು ಹೊಗೆ ಹಾಕಲು ಹೋದ ಕುಟುಂಬವೊಂದು ಮನೆಯನ್ನೇ ಸುಟ್ಟುಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಬಂದಾ ಜಿಲ್ಲೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ. ಕುಟುಂಬದವರು ತಮ್ಮ ಮನೆಯಲ್ಲಿ ನಾಗರ ಹಾವು ಇರುವುದನ್ನು ಕಂಡಿದ್ದಾರೆ. ಇದರಿಂದ ಭಯಭೀತರಾದ ಅವರು, ನಾಗರ ಹಾವನ್ನು ಓಡಿಸಲು ಬೆರಣಿಯನ್ನು ಹಚ್ಚಿದ್ದಾರೆ. ಆದರೆ, ಬೆರಣಿಗೆ ಹಚ್ಚಿದ ಬೆಂಕಿ ಕಿಡಿ ದಗ್ಗನೇ ಹೊತ್ತಿ ಮನೆಗೆಲ್ಲ ವ್ಯಾಪಿಸಿಕೊಂಡಿದೆ. ಇದರಿಂದಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಹೀಗೆ ಅಚಾನಕ್​ ಆದ ಘಟನೆಯಿಂದ ಮನೆಯಲ್ಲಿದ್ದ ನಗದು, ಚಿನ್ನಾಭರಣಗಳು ಮತ್ತು ಹಲವಾರು ಕ್ವಿಂಟಲ್ ಧಾನ್ಯಗಳು ಸುಟ್ಟು ಬೂದಿಯಾಗಿವೆ. ಇದರಿಂದಾಗಿ ಮನೆಯವರು ದಿಕ್ಕು ತೋಚದಂತಾಗಿದ್ದಾರೆ.

ದೆಹಲಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ರಾಜ್‌ಕುಮಾರ್, ಪತ್ನಿ ಮತ್ತು ಐವರು ಮಕ್ಕಳೊಂದಿಗೆ ಮನೆಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಅತ್ಯಂತ ಶ್ರಮ ಪಟ್ಟು ನಿರ್ಮಿಸಿದ ಮನೆ, ಜೀವಮಾನದ ಉಳಿತಾಯ, ಆಸ್ತಿ ಸೇರಿದಂತೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದು ದಿಢೀರ್ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದುರ್ಘಟನೆ ಬಗ್ಗೆ ಕಂದಾಯ ಇಲಾಖೆಗೂ ಮಾಹಿತಿ ನೀಡಲಾಗಿದ್ದು, ಸದ್ಯ ಹಾನಿಯ ಪ್ರಮಾಣವನ್ನು ಅಂದಾಜಿಸಲಾಗುತ್ತಿದೆ.

ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

‘ಹಾವು ಓಡಿಸಲು ಹೊಗೆ ಹಾಕಲು ಯತ್ನಿಸಿದೆವು. ಆದರೆ ದಿಢೀರ್ ಎಂದು ಬೆಂಕಿ ಹೊತ್ತಿಕೊಂಡಿತು ಎಂದು ಕುಟುಂಬದವರು ಹೇಳುತ್ತಿದ್ದಾರೆ, ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT