ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉದ್ಯಮಿ ಮುಕೇಶ್ ಅಂಬಾನಿಗೆ ಮೂರನೇ ಬಾರಿಗೆ ಜೀವ ಬೆದರಿಕೆ; 400 ಕೋಟಿ ರೂ. ಗೆ ಬೇಡಿಕೆ!

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಗೆ ಅಪರಿಚಿತ ವ್ಯಕ್ತಿಯಿಂದ 400 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಇಮೇಲ್ ಬಂದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅಂಬಾನಿ ಕಂಪನಿಗೆ ಸೋಮವಾರ ಇಮೇಲ್ ಬಂದಿದೆ.

ಮುಕೇಶ್ ಅಂಬಾನಿ
Ramyashree GN
Updated On : 31 Oct 2023, 8:42 pm

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಗೆ ಅಪರಿಚಿತ ವ್ಯಕ್ತಿಯಿಂದ 400 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಇಮೇಲ್ ಬಂದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅಂಬಾನಿ ಕಂಪನಿಗೆ ಸೋಮವಾರ ಇಮೇಲ್ ಬಂದಿದೆ. ಕಳೆದ ನಾಲ್ಕು ದಿನಗಳಲ್ಲಿ ಅಂಬಾನಿಗೆ ಕಳುಹಿಸಲಾದ ಮೂರನೇ ಬೆದರಿಕೆ ಇಮೇಲ್ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಶುಕ್ರವಾರ ಅಪರಿಚಿತ ವ್ಯಕ್ತಿಯಿಂದ 20 ಕೋಟಿ ರೂ. ನೀಡಬೇಕು. ಇಲ್ಲದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಮೊದಲ ಇಮೇಲ್ ಬಂದಿತ್ತು. ನಂತರ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಗಾಮ್‌ದೇವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Advertisement

Advertisement

ಶನಿವಾರ ಕಂಪನಿಗೆ 200 ಕೋಟಿ ರೂಪಾಯಿ ಬೇಡಿಕೆಯ ಇಮೇಲ್ ಬಂದಿದೆ. ಅದರಂತೆ ಕಂಪನಿಗೆ ಸೋಮವಾರ ಮೂರನೇ ಇಮೇಲ್ ಬಂದಿದ್ದು, ಅದನ್ನು ಕಳುಹಿಸಿದವರು ತಮ್ಮ ಹಣದ ಬೇಡಿಕೆಯನ್ನು ದ್ವಿಗುಣಗೊಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಪೊಲೀಸರು, ಅವರ ಅಪರಾಧ ವಿಭಾಗ ಮತ್ತು ಸೈಬರ್ ತಂಡಗಳು ಇಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: 'ನಮ್ಮ ಬಳಿ ಅತ್ಯುತ್ತಮ ಶೂಟರ್‌ಗಳಿದ್ದಾರೆ'; 20 ಕೋಟಿ ರೂ. ಕೊಡದಿದ್ದರೆ ಕೊಲ್ಲುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ!

ಕಳೆದ ವರ್ಷ ಮುಂಬೈ ಪೊಲೀಸರು ಬಿಹಾರದ ದರ್ಭಾಂಗ್‌ನಿಂದ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದರು.

ಮುಂಬೈನ ಸರ್ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments