ಡೊಮಿನಿಕ್ ಮಾರ್ಟಿನ್ 
ದೇಶ

ಕೇರಳ ಸ್ಫೋಟ ಪ್ರಕರಣ: ಕೇವಲ 3 ಸಾವಿರ ರೂಪಾಯಿ ಖರ್ಚು ಮಾಡಿ ಬಾಂಬ್ ತಯಾರಿಕೆ!

ಎರಡು ದಿನಗಳ ಹಿಂದೆ ಕೇರಳದ ಕಲಮಶ್ಶೇರಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಡೊಮಿನಿಕ್ ಮಾರ್ಟಿನ್ ತಾನು ಬಾಂಬ್ ತಯಾರಿಕೆಯನ್ನು ಇಂಟರ್ನೆಟ್ ನಲ್ಲಿ ನೋಡಿ ಕಲಿತಿದ್ದೆ ಎಂದು ಹೇಳಿಕೆ ನೀಡಿದ್ದಾನೆ.

ಕೊಚ್ಚಿ: ಕೇರಳದ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಪೋಟಕ್ಕೆ ಕಾರಣಕರ್ತನಾದ ಪ್ರಮುಖ ಶಂಕಿತ ಆರೋಪಿ ತಾನು ಅಂತರ್ಜಾಲದಿಂದ ಬಾಂಬ್ ತಯಾರಿಕೆ ಕಲಿತು, ಕೇವಲ 3 ಸಾವಿರ ಖರ್ಚು ಮಾಡಿ ಬಾಂಬ್ ತಯಾರಿಸಿರುವುದಾಗಿ ಹೇಳಿಕೊಂಡಿದ್ದಾನಂತೆ.

ಎರಡು ದಿನಗಳ ಹಿಂದೆ ಕೇರಳದ ಕಲಮಶ್ಶೇರಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಡೊಮಿನಿಕ್ ಮಾರ್ಟಿನ್ ತಾನು ಬಾಂಬ್ ತಯಾರಿಕೆಯನ್ನು ಇಂಟರ್ನೆಟ್ ನಲ್ಲಿ ನೋಡಿ ಕಲಿತಿದ್ದೆ ಎಂದು ಹೇಳಿಕೆ ನೀಡಿದ್ದಾನೆ. ತಾನು ಕೇವಲ ಮೂರು ಸಾವಿರ ರೂ. ಖರ್ಚಿನಲ್ಲಿ ಬಾಂಬ್ ತಯಾರಿ ಮಾಡಿದ್ದೆ ಎಂದು 48 ವರ್ಷದ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಇಲೆಕ್ಟ್ರಿಕ್ ಸರ್ಕಿಟ್ ನಲ್ಲಿ ಪರಿಣಿತನಾಗಿರುವ ಡೊಮಿನಿಕ್ ಮಾರ್ಟಿನ್ ಹಲವು ವರ್ಷಗಳ ಕಾಲ ದುಬೈನಲ್ಲಿ ಕೆಲಸ ಮಾಡಿದ್ದ. ಕಳೆದ ಐದು ವರ್ಷಗಳಿಂದ ಮಾರ್ಟಿನ್ ಕುಟುಂಬ ಕೊಚ್ಚಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದೆ. ಈತ ಈ ಸ್ಫೋಟ ನಡೆಸಲೆಂದೆ ಎರಡು ತಿಂಗಳ ಹಿಂದೆ ದುಬೈನಿಂದ ವಾಪಾಸ್ ಕೇರಳಕ್ಕೆ ಬಂದಿದ್ದ ಎಂದು ವರದಿ ಹೇಳಿದೆ.

ಸ್ಫೋಟಕ್ಕೆ ಬಳಿಸಿದ ಐಇಡಿಗಳನ್ನು ಕಡಿಮೆ ಗುಣಮಟ್ಟದ ಸ್ಫೋಟಕಗಳಿಂದ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸ್ಪೋಟಕಗಳನ್ನು ಸಾಮಾನ್ಯವಾಗಿ ಪಟಾಕಿಗಳ ತಯಾರಿಕೆಗೆ ಬಳಸಲಾಗುತ್ತದೆ.

ಮೂಲಗಳ ಪ್ರಕಾರ ಮಾರ್ಟಿನ್ ತನ್ನ ಮನೆಯಲ್ಲಿ ಐಇಡಿಗಳನ್ನು ಜೋಡಿಸಿದ್ದಾನೆ. ಯೆಹೋವನ ಸಮಾವೇಶದಲ್ಲಿ ಭಾಗವಹಿಸಿದವರನ್ನು ಕೊಲ್ಲುವ ಉದ್ದೇಶದಿಂದ ಮಾರ್ಟಿನ್ ಸ್ಫೋಟಕಗಳನ್ನು ಹಾಲ್‌ ನೊಳಗೆ ಇರಿಸಿದ್ದ.

ಶರಣಾಗುವ ಮೊದಲು, ಮಾರ್ಟಿನ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವೀಡಿಯೊವನ್ನು ಸಹ ಪೋಸ್ಟ್ ಮಾಡಿದ್ದಾರೆ. ವೀಡಿಯೊದಲ್ಲಿ, ಸಂಘಟನೆಯ ಬೋಧನೆಗಳು “ದೇಶದ್ರೋಹಿ” ಆಗಿರುವುದರಿಂದ ತಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಸಮುದಾಯವು ಜನರಿಗೆ, ಮಕ್ಕಳಿಗೆ ಸಹ ತಪ್ಪು ಮೌಲ್ಯಗಳನ್ನು ಕಲಿಸುತ್ತಿದೆ ಎಂದು ಆತ ವೀಡಿಯೊದಲ್ಲಿ ಹೇಳಿದ್ದಾನೆ.

ಭಾನುವಾರ ಕೊಚ್ಚಿ ಬಳಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆದ ಸರಣಿ ಸ್ಪೋಟದಲ್ಲಿ ಇಬ್ಬರು ಮಹಿಳೆಯರು ಮತ್ತು 12 ವರ್ಷದ ಬಾಲಕಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ. ಯೆಹೋವನ ಸಾಕ್ಷಿಗಳ ಅಧಿವೇಶನದಲ್ಲಿ ಸುಮಾರು 2,000 ಜನರು ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT