ಪಾಕ್-ಬಾಂಗ್ಲಾ ವಿಶ್ವಕಪ್ ಪಂದ್ಯದಲ್ಲಿ ಪ್ಯಾಲೆಸ್ತೇನ್ ಧ್ವಜ ಹಾರಾಟ!
ಈಡೆನ್ ಗಾರ್ಡನ್ ನಲ್ಲಿ ನಡೆದ ಪಾಕ್-ಬಾಂಗ್ಲಾದೇಶದ ಪಂದ್ಯದಲ್ಲಿ ಗುಂಪೊಂದು ಉದ್ದೇಶಪೂರ್ವಕವಾಗಿ ಪ್ಯಾಲೆಸ್ತೇನ್ ಧ್ವಜವನ್ನು ಪ್ರದರ್ಶಿಸಿದೆ.
ಕೋಲ್ಕತ್ತ: ಈಡೆನ್ ಗಾರ್ಡನ್ ನಲ್ಲಿ ನಡೆದ ಪಾಕ್-ಬಾಂಗ್ಲಾದೇಶದ ಪಂದ್ಯದಲ್ಲಿ ಗುಂಪೊಂದು ಉದ್ದೇಶಪೂರ್ವಕವಾಗಿ ಪ್ಯಾಲೆಸ್ತೇನ್ ಧ್ವಜವನ್ನು ಪ್ರದರ್ಶಿಸಿದೆ.
ಪಂದ್ಯದ ಪಾರ್ಶ್ವದಲ್ಲಿ ಪ್ಯಾಲೆಸ್ತೇನ್ ಮುಕ್ತಗೊಳಿಸಿ ಎಂಬ ಅಭಿಯಾನ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ಯಾಲೆಸ್ತೇನ್ ಧ್ವಜವನ್ನು ಹಾರಿಸಿರುವುದು ವೈರಲ್ ಆಗತೊಡಗಿವೆ.
ಈ ಕುರಿತು ಐಸಿಸಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ವರದಿಗಳ ಪ್ರಕಾರ, ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ಯಾಲೆಸ್ತೇನ್ ಬೆಂಬಲಿಗರು ಬಾಂಗ್ಲಾದೇಶದವರೇ ಅಥವಾ ಭಾರತದವರೇ ಎಂಬುದು ಸ್ಪಷ್ಟವಾಗಿಲ್ಲ. ಪಂದ್ಯ ವೀಕ್ಷಿಸಲು ಬಾಂಗ್ಲಾದೇಶದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಬಂಧಿತ ವ್ಯಕ್ತಿಗಳು ಯಾವ ದೇಶಕ್ಕೆ ಸಂಬಂಧಿಸಿದವರು ಎಂಬುದು ಈ ವರೆಗೂ ತಿಳಿದುಬಂದಿಲ್ಲ. ಇಂದು ಮೈದಾನದಲ್ಲಿ 27,940 ಮಂದಿ ಪಂದ್ಯ ವೀಕ್ಷಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.