IIT Delhi 
ದೇಶ

ಐಐಟಿ ದೆಹಲಿ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ನೇಣಿಗೆ ಶರಣು

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(ಐಐಟಿ ದೆಹಲಿ) ಎಂಜಿನಿಯರಿಂಗ್ ವಿದ್ಯಾರ್ಥಿ ಶುಕ್ರವಾರ ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(ಐಐಟಿ ದೆಹಲಿ) ಎಂಜಿನಿಯರಿಂಗ್ ವಿದ್ಯಾರ್ಥಿ ಶುಕ್ರವಾರ ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಣಿತ ಮತ್ತು ಕಂಪ್ಯೂಟಿಂಗ್‌ನಲ್ಲಿ ಬಿಟೆಕ್ ಮಾಡುತ್ತಿದ್ದ 21 ವರ್ಷದ ಅನಿಲ್ ಕುಮಾರ್, ಐಐಟಿಯ  ವಿಂಧ್ಯಾಚಲ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಜೆ 6 ಗಂಟೆ ಸುಮಾರಿಗೆ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ಸಂಸ್ಥೆಯ ನಿಯಮಗಳ ಪ್ರಕಾರ, ಕುಮಾರ್ ಅವರು ಜೂನ್‌ನಲ್ಲಿ ಹಾಸ್ಟೆಲ್ ಕೊಠಡಿಯನ್ನು ಖಾಲಿ ಮಾಡಬೇಕಾಗಿತ್ತು. ಆದರೆ ಕುಮಾರ್ ಕೆಲವು ವಿಷಯಗಳಲ್ಲಿ ಅರ್ಹತೆ ಪಡೆಯಲು ಸಾಧ್ಯವಾಗದ ಕಾರಣ ಆ ವಿಷಯಗಳಲ್ಲಿ ತೇರ್ಗಡೆಯಾಗಲು ಆರು ತಿಂಗಳವರೆಗೆ ಹಾಸ್ಟೆಲ್ ನಲ್ಲಿ ತಂಗಲು ಅವಕಾಶ ನೀಡಲಾಗಿತ್ತು ಎಂದು ಅಧಿಕಾರಿ ಹೇಳಿದ್ದಾರೆ.

ಇಲ್ಲಿಯವರೆಗೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Nepal Violence: FB, Tiktok, Instagram ನಿಷೇಧದ ವಿರುದ್ಧ ಆಕ್ರೋಶ; ಸಂಸತ್ ಭವನಕ್ಕೆ ಬೆಂಕಿ; 14 ಮಂದಿ ಸಾವು, Video!

Couple Romance: ರೈಲಿನಲ್ಲಿ ಜನರ ಎದುರೆ ತಬ್ಬಿಕೊಂಡು ಚುಂಬಿಸಿ ಯುವ ಜೋಡಿಯ 'ರಾಸಲೀಲೆ'; ಮುಜುಗರಕ್ಕೀಡಾದ ಪ್ರಯಾಣಿಕರು, Video!

ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ: 3 ದಿನ ರಾಜ್ಯಾದ್ಯಂತ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆ

ಬಿಜೆಪಿಯವರು ಪ್ರಚೋದನೆ ಮಾಡುವುದರಲ್ಲಿ ನಿಸ್ಸೀಮರು, ಮದ್ದೂರು ಘಟನೆ ಬಗ್ಗೆ ವರದಿ ಬಂದ ಮೇಲೆ ಕ್ರಮ: ಸಿದ್ದರಾಮಯ್ಯ

'ಪ್ರಧಾನಿ ಮೋದಿ ನೋಡಿ ಕಲಿಯಿರಿ...': Netanyahu ಗೆ ಇಸ್ರೇಲಿ ರಕ್ಷಣಾ ನೀತಿ ತಜ್ಞರ ಚಾಟಿ!

SCROLL FOR NEXT