ಜಯ ವರ್ಮಾ ಸಿನ್ಹಾ 
ದೇಶ

ರೈಲ್ವೆ ಇತಿಹಾಸದಲ್ಲಿ ಇದೇ ಮೊದಲ ಬಾರಿ ಮಂಡಳಿಗೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಜಯಾ ವರ್ಮಾ ಸಿನ್ಹಾ ನೇಮಕ!

ಈ ಮೂಲಕ ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ.

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಜಯಾ ವರ್ಮಾ ಸಿನ್ಹಾ ಅವರನ್ನು ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ರೈಲ್ವೆ ಸಚಿವಾಲಯದ 105 ವರ್ಷಗಳ ಇತಿಹಾಸದಲ್ಲಿ ಆ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಮೂಲಕ ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ.

ಭಾರತೀಯ ರೈಲ್ವೆ ನಿರ್ವಹಣಾ ಸೇವೆಗಳು, ಸದಸ್ಯ (ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ), ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗೆ ಜಯ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ವರದಿ ಹೇಳಿದೆ.

ಜಯ ವರ್ಮಾ ಸಿನ್ಹಾ ಅವರು ಅನಿಲ್ ಕುಮಾರ್ ಲಹೋಟಿ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಸೆಪ್ಟೆಂಬರ್ 1 ರಂದು ಸಿನ್ಹಾ ಅಧಿಕಾರ ವಹಿಸಿಕೊಳ್ಳುತ್ತಾರೆ. ಅನಿಲ್ ಕುಮಾರ್ ಅವರ ಅಧಿಕಾರಾವಧಿಯು ಆಗಸ್ಟ್ 31, 2024 ರಂದು ಕೊನೆಗೊಳ್ಳುತ್ತದೆ. ಸಿನ್ಹಾ ಅವರು ಅಕ್ಟೋಬರ್ 1 ರಂದು ನಿವೃತ್ತರಾಗಲಿದ್ದಾರೆ.

ಜಯ ವರ್ಮಾ ಸಿನ್ಹಾ ಅವರು ಭಾರತೀಯ ರೈಲ್ವೆ ಸಂಚಾರ ಸೇವೆಯ 1986 ರ ಬ್ಯಾಚ್ ಅಧಿಕಾರಿ. ಅವರು ಪ್ರಸ್ತುತ ರೈಲ್ವೆ ಮಂಡಳಿಯಲ್ಲಿ ಸದಸ್ಯ (ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ) ಸ್ಥಾನವನ್ನು ಹೊಂದಿದ್ದಾರೆ. ಸಿನ್ಹಾ ಅವರು ರೈಲ್ವೇ ಮಂಡಳಿಯ (ಸಂಚಾರ ಸಾರಿಗೆ) ಹೆಚ್ಚುವರಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅಲಹಾಬಾದ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಯಾದ ಜಯಾ ವರ್ಮಾ ಸಿನ್ಹಾ ಅವರು 1988 ರಲ್ಲಿ ಭಾರತೀಯ ರೈಲ್ವೆ ಸಂಚಾರ ಸೇವೆ ಗೆ ಸೇರಿದ್ದರು. ಉತ್ತರ ರೈಲ್ವೆ, ಆಗ್ನೇಯ ರೈಲ್ವೆ ಮತ್ತು ಪೂರ್ವ ರೈಲ್ವೆ ಹೀಗೆ ಮೂರು ರೈಲ್ವೆ ವಲಯಗಳಲ್ಲಿ ಕೆಲಸ ಮಾಡಿದರು.

ಬಾಲಸೋರ್ ರೈಲು ಅಪಘಾತದ ನಂತರ ಜಯಾ ಅವರು ಸದಸ್ಯರಾಗಿ (ಕಾರ್ಯಾಚರಣೆಗಳು ಮತ್ತು ವ್ಯವಹಾರ ಅಭಿವೃದ್ಧಿ) ರೈಲ್ವೆಯ ಮಾಧ್ಯಮ ತೊಡಗಿಸಿಕೊಳ್ಳುವಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT